

ವಿಜಯಪುರ: ಬುಲೆರೋ ವಾಹನ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ ತಾಲೂಕಿನ ಹಡಗಲಿ ಗ್ರಾಮದ ಬಳಿಯ ಕವಲಗಿ ಹತ್ತಿರದಲ್ಲಿ ಈ ದುರಂತ ಸಂಭವಿಸಿದ್ದು, ಪ್ರದೀಪ ಭೀಮು ರಾಠೋಡ(18) ಹಾಗೂ ಅನೀಲ ಚಿನ್ನು ರಾಠೋಡ (18) ಮೃತ ದುರ್ದೈವಿಗಳು.
ಅಪಘಾತ ನಡೆದ ಕೂಡಲೇ ಚಾಲಕ ಬುಲೆರೋ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)