ನಂಜನಗೂಡಿನಲ್ಲಿ ಭೀಕರ ಅಪಘಾತ: ಮೂವರು ಸಾವು

ಮೈಸೂರು: ನಂಜನಗೂಡು ಮುಖ್ಯರಸ್ತೆಯಲ್ಲಿ ಲಾರಿ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಬೈಕ್​ ನಂಜನಗೂಡಿನಿಂದ ತಿ.ನರಸೀಪುರಕ್ಕೆ ತೆರಳುತ್ತಿದ್ದಾಗ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂಜನಗೂಡಿನ ನಿವಾಸಿಗಳಾಗಿದ್ದ ಚಂದ್ರ, ಬಸವ ಹಾಗೂ ಪ್ರಭುಸ್ವಾಮಿ ಮೃತರು.

ಘಟನೆ ನಡೆಯುತ್ತಿದ್ದಂತೆ ಬಿಳಿಗೆರೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. (ದಿಗ್ವಿಜಯ ನ್ಯೂಸ್)