ನಾಲ್ಕು ಪಲ್ಟಿ ಹೊಡೆದ ಎಸ್​ಯುವಿ; ಇಬ್ಬರ ದುರ್ಮರಣ

ದಾವಣಗೆರೆ: ದಾವಣಗೆರೆ ಹೊರವಲಯದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಮಹೀಂದ್ರ XUV (KA17 Z-3614) ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ನಾಲ್ಕು ಪಲ್ಟಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಇಬ್ಬರು ಭೀಕರವಾಗಿ ಸಾವಿಗೀಡಾಗಿದ್ದಾರೆ. ದೇಹಗಳು ಛಿದ್ರಗೊಂಡಿವೆ. ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಕಾರು ದಾವಣಗೆರೆಯ ಡಾ.ಪ್ರಕಾಶ್ ಎಂಬುವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *