More

  ಶಾಲಾ ಕಾರ್ಯಕ್ರಮ ಮುಗಿಸಿಕೊಂಡು ಹೋಗುವಾಗ ಭೀಕರ ಅಪಘಾತ; ನಾಲ್ವರು ವಿದ್ಯಾರ್ಥಿಗಳು ಸಾವು

  ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಆಲಗೂರ ಗ್ರಾಮದ ವರ್ದಮಾನ ಖಾಸಗಿ ಶಾಲೆಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ವಾರ್ಷಿಕ ಸ್ನೇಹ ಸಮ್ಮೇಳನ ಮುಗಿಸಿಕೊಂಡು ವಿದ್ಯಾರ್ಥಿಗಳು ಶಾಲಾ ವಾಹನದಲ್ಲಿ ಮನೆಗೆ ಹೋಗುವಾಗ ಭೀಕರ ಅಪಘಾತ ಸಂಭವಿಸಿದೆ.

  ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ರಸ್ತೆಯ ಮೇಲೆ ನಿಲ್ಲಿಸಿದ ಕಬ್ಬಿನ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಾವನಪ್ಪಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. 20 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೆಲ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.

  ಅಪಘಾತದಲ್ಲಿ ತಾಲ್ಲೂಕಿನ ಕವಟಗಿ ಗ್ರಾಮದ ವಿದ್ಯಾರ್ಥಿ ಗೋವಿಂದ ಸದಾಶಿವ ಜಂಬಗಿ(11), ಶ್ವೇತಾ ಪಾಟೀಲ(11), ಬಸವರಾಜ ಕೊಠಗಿ(15), ಸಾಗರ ಗುರಲಿಂಗ ಕಡಕೋಳ(16) ಸಾವನಪ್ಪಿದ್ದಾರೆ.

  ಸಾವಳಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ, ಸರ್ಕಾರಿ ಆಸ್ಪತ್ರೆಗೆ ರಾತ್ರಿ ಎಸ್ಪಿ ಅಮರನಾಥ ರೆಡ್ಡಿ ಬೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

  ಭಯಪಡಬೇಡಿ, ನೆಮ್ಮದಿಯಿಂದ ಪರೀಕ್ಷೆ ಎದುರಿಸಿ: ವಿದ್ಯಾರ್ಥಿಗಳಿಗೆ ಬೋಧಿಸಿದ ಮೋದಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts