ಡೇರಿಗೆ ಹಾಲು ಹಾಕಲು ಹೋಗುತ್ತಿದ್ದ ಮಹಿಳೆಯ ಹಿಂದೆಯೇ ಜವರಾಯನ ಅಟ್ಟಹಾಸ

ಮಂಡ್ಯ: ರಸ್ತೆ ಬದಿಯಲ್ಲಿ ನೆಡೆದು ಡೇರಿಗೆ ಹಾಲು ಹಾಕಲು ಹೋಗುತ್ತಿದ್ದ ಮಹಿಳೆಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ.

ಕೆ.ಆರ್.ಪೇಟೆ ತಾಲೂಕಿನ ಹರಪನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಭಾನುವಾರ ರಾತ್ರಿ 8ಗಂಟೆ ಸಮಯದಲ್ಲಿ ನಡೆದು ಹೋಗುತ್ತಿದ್ದ ಭಾಗ್ಯಮ್ಮ (40) ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಕೂಡಲೇ ಅವರನ್ನು 108 ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದರು. ಆದರೆ, ತೀವ್ರ ರಕ್ತಸ್ರಾವದಿಂದ ಮಾರ್ಗ ಮಧ್ಯದಲ್ಲಿಯೇ ಅವರು ಕೊನೆಯುಸಿರೆಳೆದರು.

ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಪಟ್ಟಣ ಪೋಲಿಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

ಅದಾನಿ ಗ್ರೂಪ್ ನ ಸೋಲಾರ್ ಘಟಕದ ಬಳಿ ಅಳವಡಿಸಿರುವ ಸಿಸಿ ಟಿವಿಯ ಫೂಟೇಜ್ ತೆಗೆದುಕೊಂಡು ಅಪಘಾತ ನಡೆಸಿರುವ ವಾಹನ ಪತ್ತೆ ಮಾಡುವುದಾಗಿ ಸಬ್ ಇನ್ಸ್ ಪೆಕ್ಟರ್ ಎಚ್.ಎಸ್.ವೆಂಕಟೇಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *