ಮಂಡ್ಯ: ಆಕಸ್ಮಿಕವಾಗಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳೆಲ್ಲವು ಸುಟ್ಟು ಕರಕಲಾಗಿರುವ ಘಟನೆ ನಗರದ ಹೌಸಿಂಗ್ ಬೋರ್ಡ್ ನಲ್ಲಿ ಜರುಗಿದೆ. ಅಂಗನವಾಡಿ ಕಾರ್ಯಕರ್ತೆ ಅನಿತಾ ಎಂಬುವರ ಮನೆಯಲ್ಲಿ ಅನಾಹುತ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಸಂದರ್ಭ ಈ ಘಟನೆ ನಡೆದಿದೆ.
ಇಬ್ಬರು ಮಕ್ಕಳನ್ನು ಶಾಲೆಗೆ ಕಳುಹಿಸಿ ಅಂಗನವಾಡಿಗೆ ತೆರಳಿದ ವೇಳೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ಟಿವಿ, ಫ್ರಿಜ್, ವಾಕರ್ ನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಸುಟ್ಟು ಕರಕಲಾಗಿದೆ. ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.