

ಮಂಡ್ಯ: ಪೊಲೀಸ್ ಸಿಬ್ಬಂದಿ ಸಂಚರಿಸುತ್ತಿದ್ದ ಎರಡು ಬೈಕ್ಗಳ ನಡುವೆ ಡಿಕ್ಕಿಯಾಗಿ ಡಿಎಆರ್ ಪೇದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಎಎಸ್ಐಗೆ ಗಂಭೀರ ಗಾಯಗೊಂಡಿದ್ದಾರೆ.
ಮದ್ದೂರು ತಾಲೂಕು ತೊರೆಶೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ಇಂದು(ಗುರುವಾರ) ಈ ಅವಘಡ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಪೇದೆ ಅರುಣ್(26) ಮೃತರು. ಕೆಸ್ತೂರಿನ ಎಎಸ್ಐ ಬಾಲಯ್ಯ ಗಾಯಗೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ತೊಪ್ಪನಹಳ್ಳಿಯ ವ್ಯಕ್ತಿಗೆ ಅರುಣ್ ಗನ್ಮ್ಯಾನ್ ಆಗಿದ್ದರು. ಕಾರ್ಯನಿಮಿತ್ತ ತೊರೆಶೆಟ್ಟಹಳ್ಳಿಗೆ ಆಗಮಿಸಿದ್ದರು. ಈ ವೇಳೆ ಪೇದೆ ಸವಾರಿ ಮಾಡುತ್ತಿದ್ದ ಬೈಕ್ ಮತ್ತು ಎಎಸ್ಐ ಕುಳಿತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿವೆ.
ಮೃತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮದ್ದೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಎಎಸ್ಪಿ ಡಾ.ಶೋಭಾರಾಣಿ, ಡಿವೈಎಸ್ಪಿ ಪೃಥ್ವಿ, ಸಿಪಿಐ ಪ್ರಸಾದ್ ಪರಿಶೀಲನೆ ನಡೆಸಿದರು.