More

    ಸೌಕರ್ಯ ಕಲ್ಪಿಸದಿದ್ದರೆ ಸಿಬ್ಬಂದಿ ಮೇಲೆ ಕ್ರಮ

    ಬೆಳಗಾವಿ: ನವಜಾತ ಶಿಶುಗಳು ಮತ್ತು ಮಕ್ಕಳಿಗೆ ವೈದ್ಯಕೀಯ ಸೌಕರ್ಯಗಳು ಸಿಗುತ್ತಿಲ್ಲ. ಹಾಗಾಗಿ, ಜಿಲ್ಲಾಸ್ಪತ್ರೆಯಲ್ಲಿನ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಬೇಕಾಗುತ್ತದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಎಚ್ಚರಿಸಿದರು.

    ನಗರದ ಜಿಲ್ಲಾಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ನಗರದ ಸುವರ್ಣ ವಿಧಾನಸೌಧದಲ್ಲಿ ಅ. 4ರಂದು ನಡೆಯಲಿರುವ ಸಭೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು. ಜಿಲ್ಲಾಸ್ಪತ್ರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್ಚೆತ್ತುಕೊಂಡು ವ್ಯವಸ್ಥೆ ಸರಿಪಡಿಸಬೇಕು. ಇಲ್ಲದಿದ್ದರೆ ಆಯೋಗದಿಂದ ಸ್ವಯಂ ದೂರು ದಾಖಲಿಸಿಕೊಂಡು, ಸಂಬಂಧಿಸಿದ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುಗಳು ಮತ್ತು ಮಕ್ಕಳ ಚಿಕಿತ್ಸೆಗೆ ಪೂರಕವಾಗಿ ವೈದ್ಯಕೀಯ ಸಲಕರಣೆಗಳಿಲ್ಲ. ಸುರಕ್ಷತೆ ದೃಷ್ಟಿಯಿಂದ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಸಿಲ್ಲ. ಹವಾನಿಯಂತ್ರಿತ ವ್ಯವಸ್ಥೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಬಾಣಂತಿಯರಿಗೆ ಹಾಲು ಮತ್ತು ಮೊಟ್ಟೆ ನೀಡುತ್ತಿಲ್ಲ. ಅವರು ಬಳಸುವ ಶೌಚಗಹಗಳಲ್ಲಿ ಬೆಳಕಿನ ವ್ಯವಸ್ಥೆ ಇಲ್ಲ. ಮಕ್ಕಳ ಪೌಷ್ಟಿಕ ಪುನಶ್ಚೇತನ ಘಟಕದಲ್ಲಿ ಯಾವ ಸೌಕರ್ಯವೂ ಸಿಗದ ಕಾರಣ, ಪೌಷ್ಟಿಕ, ತೀವ್ರ ಅಪೌಷ್ಟಿಕ ಮತ್ತು ಕಡಿಮೆ ತೂಕ ಹೊಂದಿದ ಮಕ್ಕಳು ಹಾಗೂ ಅವರ ಪಾಲಕರು ಪರದಾಡುವಂತಾಗಿದೆ ಎಂದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತೇಶ ಭಜಂತ್ರಿ, ಮಕ್ಕಳ ರಕ್ಷಣಾಧಿಕಾರಿ ಸಚಿನ ಹಿರೇಮಠ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts