More

    ಸಂಖ್ಯಾಶಾಸ್ತ್ರ ಬಳಕೆಯಿಂದ ನಿಖರ ಮಾಹಿತಿ

    ಎನ್.ಆರ್.ಪುರ: ಸಂಖ್ಯಾಶಾಸ್ತ್ರದ ಬಳಕೆಯಿಂದ ಸಮಾಜಶಾಸ್ತ್ರೀಯ ಅಧ್ಯಯನಗಳು ಹೆಚ್ಚು ನಿಖರ ಮತ್ತು ವಿಶ್ವಾಸಾರ್ಹ ಮಾಹಿತಿ ಒದಗಿಸಲು ಸಾಧ್ಯ ಎಂದು ಶಿವಮೊಗ್ಗ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಸುಕೀರ್ತಿ ಹೇಳಿದರು.

    ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ವೇದಿಕೆಯಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಮಾಜಶಾಸ್ತ್ರ ಸಂಶೋಧನೆಯಲ್ಲಿ ಸಂಖ್ಯಾಶಾಸ್ತ್ರದ ಬಳಕೆ ಕುರಿತು ಮಾತನಾಡಿದರು.
    ಸಮಾಜಶಾಸ್ತ್ರೀಯ ಅಧ್ಯಯನದಲ್ಲಿ ಸಂಖ್ಯಾಶಾಸ್ತ್ರ ಬಳಕೆಯಿಂದ ನಿಖರ ಮಾಹಿತಿ ಲಭ್ಯವಾಗುವುದರಿಂದ ಸಮಾಜದ ವಾಸ್ತವ ಮಾಹಿತಿ ಲಭ್ಯವಾಗುತ್ತದೆ. ಸಾಮಾಜಿಕ ಬದುಕಿನ ವೈಜ್ಞಾನಿಕ ಅಧ್ಯಯನ ಹೆಚ್ಚು ಲಕಾರಿಯಾಗುತ್ತವೆ ಎಂದರು.
    ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಎಚ್.ಲಕ್ಷ್ಮಣ ನಾಯಕ್ ಮಾತನಾಡಿ, ಸಮಾಜಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರದ ಬಳಕೆಯಿಂದ ಸಮಾಜದ ಯಾವುದೇ ಕ್ಲಿಷ್ಟಕರ ವಿಷಯವನ್ನು ಸುಲಭವಾಗಿ ಅರ್ಥೈಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.
    ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಜೆ.ಮಂಜುನಾಥ್ ಮಾತನಾಡಿದರು. ಇತಿಹಾಸಹ ವಿಭಾಗದ ಮುಖ್ಯಸ್ಥ ಡಿ.ನಾಗೇಶ್ ಗೌಡ, ಆಂತರಿಕ ಗುಣಮಟ್ಟದ ಭರವಸೆ ಕೋಶದ ಸಂಚಾಲಕ ಆರ್.ಕೆ.ಪ್ರಸಾದ್. ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ದಿನಕರ್, ಸಮಾಜಶಾಸ್ತ್ರ ಉಪನ್ಯಾಸಕ ಐ.ಎಂ.ರಾಜೀವ್ ಹಾಗೂ ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts