ಖಡ್ಗ ಪ್ರದರ್ಶಿಸಿ ಯತ್ನಾಳ್​ ಗೆಲುವು ಸಂಭ್ರಮಿಸಿದ ಬೆಂಬಲಿಗ; ಆರೋಪಿ ಬಂಧನ

yatnal follower
Published on

ವಿಜಯಪುರ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ.

ಇನ್ನು ವಿಜಯಪುರದಲ್ಲಿ ಬಿಜೆಪಿಯಿಂದ ಪುನರಾಯ್ಕೆಯಾದ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ಬೆಂಬಲಿಗರ ಸಂಭ್ರಮಾಚರಣೆ ವೇಳೆ ಮುಖಂಡನೊಬ್ಬ ತಲ್ವಾರ್​ ಹಿಡಿದು ರಸ್ತೆ ತುಂಬಾ ಓಡಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಆರೋಪಿ ಬಂಧನ

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾದ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್​ ಕುಮಾರ್​ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net