More

  ಚೈತ್ರಾ ಕುಂದಾಪುರ & ಟೀಂ​ ಇಂದು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್​ಗೆ ಎಂಟ್ರಿ

  ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿಯಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ ಮತ್ತು ಇತರ ಆರೋಪಿಗಳು ಇಂದು ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

  ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಚೈತ್ರಾ ಹಾಗೂ ಇತರ ಆರೋಪಿಗಳನ್ನು ಇಂದು ಕೆಎಸ್​ಆರ್​ಪಿ ಬಸ್​ನಲ್ಲಿ ಪೊಲೀಸರು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಕರೆದುಕೊಂಡು ಬಂದಿದ್ದಾರೆ. ಸಂಜೆ 6 ಗಂಟೆ ಸುಮಾರಿಗೆ ಈ ಟೀಮ್ ಜೈಲ್​ಗೆ ಎಂಟ್ರಿ ಆಗಿದೆ.

  ಮೂರನೇ ಎಸಿಎಂಎಂ ನ್ಯಾಯಾಧೀಶರ ಆದೇಶದ ಪ್ರಕಾರ ಈ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೈತ್ರಾಳನ್ನು ಹೊಸ ಜೈಲಿನ ಮಹಿಳಾ ಬ್ಯಾರಕ್​ನಲ್ಲಿ ಇರಿಸಲಾಗಿದ್ದು, ಇತರ ಆರೋಪಿಗಳಾದ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್​ ಪುರುಷರ ಸೆಲ್​ನಲ್ಲಿದ್ದಾರೆ. ಇಂದಿನಿಂದ ಹತ್ತು ದಿನಗಳ ಕಾಲ ಇವರು ಜೈಲುವಾಸ ಅನುಭವಿಸಬೇಕಾಗಿದೆ.

  ಕೋಚಿಂಗ್ ವಿದ್ಯಾರ್ಥಿಗಳ ಸುside ಬಗ್ಗೆಯೂ ನಡೆಯಿತು ಪಿಎಚ್​ಡಿ; ಅಧ್ಯಯನದಲ್ಲಿ ಕಂಡುಬಂದ ಅಂಶಗಳಿವು!

  ಸೂಕ್ತ ಎಚ್ಚರಿಕೆ ವಹಿಸದಿದ್ದರೆ ಮುಂದಿನ ಕೆಲವು ವರ್ಷಗಳಲ್ಲಿ 7.6 ಕೋಟಿ ಸಾವು ಸಾಧ್ಯತೆ!

  ರಾಜ್ಯೋತ್ಸವ ರಸಪ್ರಶ್ನೆ - 23

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts