ಸಿನಿಮಾ

ಸುಲಿಗೆ ಪ್ರಕರಣದ ಆರೋಪಿ ಬಂಧನ

ಪ್ರಯಾಣಿಕನಂತೆ ಆಟೋದಲ್ಲಿ ತೆರಳಿ ಚಾಲಕನಿಗೆ ಚಾಕು ತೋರಿಸಿ 2 ಸಾವಿರ ನಗದು, ಒಂದು ಮೊಬೈಲ್ ಹಾಗೂ ಆಟೋದೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ವರುಣ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು.

ಮೇ 19ರಂದು ರವಿ ಎಂಬುವರ ಆಟೋದಲ್ಲಿ ಇಬ್ಬರು ವ್ಯಕ್ತಿಗಳು ಕಡಕೊಳಕ್ಕೆ ತೆರಳಿದ್ದರು. ಈ ವೇಳೆ ಸ್ನೇಹಿತನನ್ನು ನೋಡಬೇಕೆಂದು ದೇವಲಾಪುರದ ಕಡೆಗೆ ಹೋಗುವಂತೆ ಹೇಳಿ ಮಾರ್ಗಮಧ್ಯೆ ಪೂರ್ಣಿಮಾ ಫಾರ್ಮ್ ಹೌಸ್ ಬಳಿ ಸ್ನೇಹಿತ ಬರುತ್ತಾನೆಂದು ಆಟೋ ನಿಲ್ಲಿಸಿದ್ದಾರೆ. ಈ ವೇಳೆ ಮೂತ್ರ ವಿಜರ್ಸನೆಗೆಂದು ತೆರಳಿದ ಚಾಲಕ ರವಿಗೆ ಚಾಕು ತೋರಿಸಿ ಆತನ ಬಳಿಯಿದ್ದ 2 ಸಾವಿರ ನಗದು, ಒಂದು ಮೊಬೈಲ್ ಫೋನ್ ಕಿತ್ತುಕೊಂಡು, ಆತನನ್ನು ಹಳ್ಳಕ್ಕೆ ತಳ್ಳಿ ಆಟೋದೊಂದಿಗೆ ಪರಾರಿಯಾಗಿದ್ದರು. ಈ ಸಂಬಂಧ ಚಾಲಕ ರವಿ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಮೇ 21ರಂದು ಆರೋಪಿಯನ್ನು ಬಂಧಿಸಿ ಆಟೋ, ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಈತ ತನ್ನ ಸ್ನೇಹಿತನೊಂದಿಗೆ ಇಲವಾಲ, ಬಿಳಿಗೆರೆ, ಮೈಸೂರು ದಕ್ಷಿಣ ಠಾಣೆಗಳ ವ್ಯಾಪ್ತಿಯಲ್ಲಿ 6 ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ತಿಳಿಸಿದರು.

Latest Posts

ಲೈಫ್‌ಸ್ಟೈಲ್