ಶಿಷ್ಟಾಚಾರ ಉಲ್ಲಂಘನೆ ಆರೋಪ; ಸಿಎಂಗೆ ನೀಡಿದ್ದ ಆಹ್ವಾನ ಪತ್ರದೊಂದಿಗೆ ನಿತಿನ್ ಗಡ್ಕರಿ ಪ್ರತಿಕ್ರಿಯೆ| sigandur-bridge

nithin gadkari
Published on

ಬೆಂಗಳೂರು; ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿ ನಡೆದ ಸಿಗಂದೂರು ಸೇತುವೆ ಉದ್ಘಾಟನೆ ಸಮಾರಂಭಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ. ಜುಲೈ 11 ರಂದು ಕರ್ನಾಟಕದ ಮುಖ್ಯಮಂತ್ರಿಗೆ ಅಧಿಕೃತ ಆಹ್ವಾನ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

 ಅಧಿಕೃತ ಆಹ್ವಾನವನ್ನು ಮುಖ್ಯಮಂತ್ರಿಗೆ ನೀಡಲಾಗಿದೆ

ಈ ಬಗ್ಗೆ ಕೇಂದ್ರ ಸಚಿವರು ತಮ್ಮ ಎಕ್ಸ್ ಖಾತೆಯಲ್ಲಿ ಮುಖ್ಯಮಂತ್ರಿಗೆ ಕಳುಹಿಸಲಾದ ಆಹ್ವಾನದ ಫೋಟೋವನ್ನು ಸಹ ಹಂಚಿಕೊಂಡಿದ್ದಾರೆ. ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ, ಕರ್ನಾಟಕದ ಶಿವಮೊಗ್ಗದಲ್ಲಿ ಇಂದು ಬಹು ಪ್ರಮುಖ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ನಡೆಯುತ್ತಿದೆ. ಜುಲೈ 11, 2025 ರಂದು ಕರ್ನಾಟಕದ ಮುಖ್ಯಮಂತ್ರಿ ಶ್ರೀ @siddaramaiah ಜಿ ಅವರಿಗೆ ಅಧಿಕೃತ ಆಹ್ವಾನವನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲು ಅವರನ್ನು ಆಹ್ವಾನಿಸಲಾಯಿತು. ಅವರಿಗೆ ನಿಗದಿತ ಕಾರ್ಯಕ್ರಮವಿದ್ದ ಕಾರಣ ವೀಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಹಾಜರಾಗುವಂತೆ ಜುಲೈ 12 ರಂದು ಮತ್ತೊಮ್ಮೆ ಪತ್ರವನ್ನು ಕಳುಹಿಸಲಾಗಿದೆ ಎಂದಿದ್ದಾರೆ.

ಸಿಎಂ ಆರೋಪವೇನು.?

(ಏಜೆನ್ಸೀಸ್)

ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ (ಸಿಗಂದೂರು ಸೇತುವೆ ಉದ್ಘಾಟನೆ )ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು ಸಿಎಂ(CM) ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net