

ಕಾರ್ಕಳ: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ಶೇ.25ರಷ್ಟಿದೆ. ಆದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಪ್ರಕ್ರಿಯೆಯಲ್ಲಿ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳು ಶೇ.40ಕ್ಕಿಂತ ಹೆಚ್ಚು ಜನಸಂಖ್ಯೆ ಇರಬೇಕೇನ್ನುವ ಮಾರ್ಗಸೂಚಿ ಮತ್ತು ಅರ್ಹತಾ ಮಾನದಂಡಗಳಿಂದ ಸದರಿ ಜನಾಂಗದವರು ಉದ್ಯೋಗ ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ಜಿಲ್ಲಾವಾರು ಜನಸಂಖ್ಯೆಗೆ ಅನುಗುಣವಾಗಿ ಪರಿಷ್ಕರಿಸಬೇಕು.
ಉಡುಪಿ ಜಿಲ್ಲೆಯಲ್ಲಿ ಗರಿಷ್ಠ ಶೇ.25ರಷ್ಟು ಮಾರ್ಗಸೂಚಿ ಮತ್ತು ಅರ್ಹತಾ ಮಾನದಂಡ ಆಯ್ಕೆ ಮಾಡಲು ಹೊರಡಿಸಿ ಸದರಿ ಜನಾಂಗದವರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘ ಅಧ್ಯಕ್ಷ ಗಂಗಾಧರ ಗೌಡ ತಾಲೂಕು ಆಡಳಿತ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. ಕಾರ್ಕಳ ತಾಲೂಕು ಶಿಶು ಅಭಿವೃದ್ಧಿ ಯೋಜನೆ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ, ಸಹಾಯಕಿಯರ ಮಹಿಳಾ ಅಭ್ಯರ್ಥಿಗಳಿಂದ ಆಹ್ವಾನಿಸಲಾದ ನೇಮಕಾತಿ ಆದೇಶಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ನಿಗದಿಪಡಿಸದೇ ಇರುವ ಬಗ್ಗೆ ಉಡುಪಿ ಜಿಲ್ಲಾ ಮಲೆಕುಡಿಯ ಸಂಘ ಆಕ್ಷೇಪ ಸಲ್ಲಿಸಿದೆ.