More

    ಚಿನ್ನಾಭರಣ ಕಳವು ಮಾಡಿದ್ದ ಆರೋಪಿ, ಕೊಲ್ಕತ್ತಾದಲ್ಲಿ ಬಂಧನ

    ಶಿವಮೊಗ್ಗ: ನಗರದ ಚಿನ್ನ ಬೆಳ್ಳಿ ಅಂಗಡಿಯಲ್ಲಿ ಕೆಲಸಕ್ಕಿದ್ದು ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪಶ್ಚಿಮ ಬಂಗಾಳ ರಾಜ್ಯದ ಕೊಲ್ಕತ್ತಾದಲ್ಲಿ ಬಂಧಿಸಿದ್ದು 8.45 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

    ಪಶ್ಚಿಮ ಬಂಗಾಳ ರಾಜ್ಯದ ಹೌರಾ ಜಿಲ್ಲೆಯ ಖಜಿರ್ದೋ ಗ್ರಾಮದ ಅದಿತೋ ಮಾಜಿ ಅಲಿಯಾಸ್ ಆದಿತ್ಯಾ (37) ಬಂಧಿತ. ಈತ ಲಷ್ಕರ್ ಮೊಹಲ್ಲಾ ನಿವಾಸಿ ಅನಿಸೂರ್ ಇಸ್ಲಾಂ ಅವರ ಚಿನ್ನ ಬೆಳ್ಳಿ ಅಂಗಡಿಯಲ್ಲಿ ಕೆಲಸಕ್ಕಿದ್ದ. ಜ.4ರಂದು ಅಂಗಡಿಯಲ್ಲಿದ್ದ ಬಂಗಾರ ಕಳವು ಮಾಡಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಮಾರ್ಗದರ್ಶನದಲ್ಲಿ ಜ.9ರಂದೇ ಆರೋಪಿಯನ್ನು ಕೊಲ್ಕತ್ತದಲ್ಲಿ ಬಂಧಿಸಿದ್ದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಮತ್ತೆ ಜ.17ರಂದು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ ಕೊಲ್ಕತ್ತಾದಲ್ಲಿ 2.70 ಲಕ್ಷ ರೂ. ಮೌಲ್ಯದ 45 ಗ್ರಾಂ ಬಂಗಾರ, ಹೈದರಾಬಾದ್ ಮತ್ತು ಸಿಕಂದರಬಾದ್ ನಲ್ಲಿ 5.75 ಲಕ್ಷ ರೂ. ಮೌಲ್ಯದ 85 ಗ್ರಾಂ ಬಂಗಾರ ವಶಪಡಿಸಿಕೊಂಡಿದ್ದಾರೆ.
    ಡಿವೈಎಸ್ಪಿ ಬಿ.ಬಾಲರಾಜ್ ಮೇಲ್ವಿಚಾರಣೆಯಲ್ಲಿ ಕೋಟೆ ಠಾಣೆ ಪ್ರಭಾರ ಇನ್‌ಸ್ಪೆಕ್ಟರ್ ರವಿ ಪಾಟೀಲ್ ನೇತೃತ್ವದಲ್ಲಿ ಪಿಎಸ್‌ಐಗಳಾದ ಕುಮಾರ್, ಸಿ.ಆರ್.ಕೊಪ್ಪದ್, ಎಎಸ್‌ಐ ಟಿ.ಶ್ರೀಹರ್ಷ ಮತ್ತು ಸಿಬ್ಬಂದಿಗಳಾದ ಅಣ್ಣಪ್ಪ, ನಾಗರಾಜ, ಆಂಜಿನಪ್ಪ, ಕಿಶೋರ ಮತ್ತು ಜಯಶ್ರೀ ಅವರಗಳನ್ನೊಳಗೊಂಡ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts