ನಾಲ್ವರ ವಿರುದ್ಧ ದೂರುನಂಜನಗೂಡು: ತಾಲೂಕಿನ ಹುಲ್ಲಹಳ್ಳಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್‌ವೆಲ್ ಕೊರೆಸುತ್ತಿದ್ದ ನಾಲ್ವರ ಮೇಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದೂರು ದಾಖಲಾಗಿದೆ.
ಯೋಜನೆಯ ಫಲಾನುಭವಿ ಕೆಂಚನಾಯ್ಕ ಪತ್ನಿ ದೇವಮ್ಮ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನೋಡಲ್ ಅಧಿಕಾರಿಗಳು ಎರಡು ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಲಾರಿ ಚಾಲಕರಾದ ಅರುಣ್‌ಕುಮಾರ್, ಮುರುಗನ್, ಏಜೆಂಟ್ ಮೈಸೂರು ತಾಲೂಕಿನ ಹಾರೋಹಳ್ಳಿಯ ರಂಗಸ್ವಾಮಿ ಹಾಗೂ ಫಲಾನುಭವಿ ದೇವಮ್ಮ ಮೇಲೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನೋಡಲ್ ಅಧಿಕಾರಿ ಶಿವಪ್ರಕಾಶ್ ತಿಳಿಸಿದ್ದಾರೆ.