

ಕೊಪ್ಪಳ: ಮೂರು-ನಾಲ್ಕು ವರ್ಷಗಳಲ್ಲ.. 34 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕು ಬಿತ್ಯಾನತಾಂಡಾದಲ್ಲಿ ಈತನನ್ನು ಬಂಧಿಸಲಾಗಿದೆ.
1987ರ ಸೆಪ್ಟಂಬರ್ 19ರಂದು ವೆಂಕರಡ್ಡಿ ಗೆದಿಗೆರಿ ಎಂಬವರಿಗೆ ಅವರ ಹೊಲದಲ್ಲಿ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ದರೋಡೆ ಮಾಡಿಕೊಂಡು ಹೋಗಿದ್ದ.
ಈ ಬಗ್ಗೆ ವೆಂಕರಡ್ಡಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಆರೋಪಿ ತಲೆಮರೆಸಿಕೊಂಡಿದ್ದು, ವರ್ಷಗಟ್ಟಲೆ ಕಾಲ ಪೊಲೀಸರಿಗೆ ಸಿಕ್ಕಿರಲಿಲ್ಲ. ಆದರೆ ಇತ್ತೀಚೆಗೆ ಆರೋಪಿಯನ್ನು ಅಳವಂಡಿ ಪೊಲೀಸರು ಬಂಧಿಸಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.