More

    ‘ಶ್ರೀರಾಮ ಮತ್ತು ರಾಷ್ಟ್ರದ ವಿಚಾರದಲ್ಲಿ ರಾಜಿಯಿಲ್ಲ; ಕಾಂಗ್ರೆಸ್‌ನಿಂದ ಉಚ್ಚಾಟಿತರಾದ ನಂತರ ಆಚಾರ್ಯ ಪ್ರಮೋದ್ ಕೃಷ್ಣಂ ಮೊದಲ ಪ್ರತಿಕ್ರಿಯೆ

    ಉತ್ತರಪ್ರದೇಶ: ಅಶಿಸ್ತಿನ ಆರೋಪದ ಮೇಲೆ ಆಚಾರ್ಯ ಪ್ರಮೋದ್ ಕೃಷ್ಣಂ ಅವರನ್ನು ಕಾಂಗ್ರೆಸ್ ಶನಿವಾರ ಪಕ್ಷದಿಂದ ಉಚ್ಚಾಟಿಸಿದೆ. ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡ ನಂತರ ಆಚಾರ್ಯ ಪ್ರಮೋದ್ ಕೃಷ್ಣಂ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಮ ಮತ್ತು ರಾಷ್ಟ್ರದ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

    ಶನಿವಾರ ಕಾಂಗ್ರೆಸ್ ತೆಗೆದುಕೊಂಡ ಕ್ರಮದ ನಂತರ, ಕಾಂಗ್ರೆಸ್ ಮಾಜಿ ನಾಯಕ ತಮ್ಮ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ್ದು, ಪೋಸ್ಟ್ ಅನ್ನು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಟ್ಯಾಗ್ ಮಾಡಿದ್ದಾರೆ.

    ಅಶಿಸ್ತು ಮತ್ತು ಪದೇ ಪದೇ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವ ದೂರುಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಮೋದ್ ಕೃಷ್ಣಂ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಹೊರಹಾಕುವ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಸ್ತಾವನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ “ಶ್ರೀ ಕಲ್ಕಿ ಧಾಮ್” ಶಂಕುಸ್ಥಾಪನೆ ಸಮಾರಂಭಕ್ಕೆ ಆಹ್ವಾನಿಸಿದ್ದರು. ಮೋದಿ ನಂತರ ಸಿಎಂ ಯೋಗಿ ಆದಿತ್ಯನಾಥ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ರಾಮ ಮಂದಿರದ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಪ್ರಮೋದ್ ಕೃಷ್ಣಂ ಅವರ ಹೇಳಿಕೆಗಳು ಹೆಚ್ಚು ಚರ್ಚೆಗೆ ಒಳಗಾಗಿದ್ದವು.

    ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸಲು ಕಾಂಗ್ರೆಸ್ ನಿರಾಕರಿಸಿದ್ದಕ್ಕೆ ಪಕ್ಷದ ಹೈಕಮಾಂಡ್ ನಿರ್ಧಾರದ ಬಗ್ಗೆ ಪ್ರಮೋದ್ ಕೃಷ್ಣಂ ಪ್ರಶ್ನೆಗಳನ್ನು ಎತ್ತಿದ್ದರು. ಇದಾದ ನಂತರ ಪಕ್ಷದ ಈ ನಿರ್ಧಾರವನ್ನು ಪ್ರಮೋದ್ ಕೃಷ್ಣಂ ತೀವ್ರವಾಗಿ ಟೀಕಿಸಿದ್ದರು.  

    ಪಾಕಿಸ್ತಾನದಲ್ಲಿ ಲೈವ್ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಭೂಕಂಪನದ ಅನುಭವ; ವಿಡಿಯೋ ನೋಡಿ

    ರಾಹುಲ್ ಜೊತೆ ಮದುವೆಯಾಗಲು ಕಂಡೀಷನ್ ಹಾಕಿದ್ದ, ಸದಾ ವಿವಾದದಿಂದ ಸುದ್ದಿಯಾಗುವ ಈ ಚೆಲುವೆ ಬಗ್ಗೆ ನಿಮಗೆಷ್ಟು ಗೊತ್ತು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts