ಕೆ.ಸಿ.ಪಾಟಾಳಿಗೆ ಸಾಧಕ ಸನ್ಮಾನ

New Project (51)
Published on

ಪುತ್ತೂರು ಗ್ರಾಮಾಂತರ: ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಬಡಗನ್ನೂರು ಗ್ರಾಮ ಪಂಚಾಯಿತಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಹಯೋಗ ಹಾಗೂ ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ ಸಂಯೋಜನೆಯಲ್ಲಿ ಇತ್ತೀಚೆಗೆ ನಡೆದ ಗ್ರಾಮ ಸಾಹಿತ್ಯ ಸಂಭ್ರಮ ನಿಮಿತ್ತ, ಹಿರಿಯ ಸಾಹಿತಿ ಕೆ.ಸಿ.ಪಾಟಾಳಿ ಪಡುಮಲೆ ಅವರನ್ನು ಗೌರವಿಸಲಾಯಿತು.

ಕಸಾಪ ಹೋಬಳಿ ಘಟಕದ ಅಧ್ಯಕ್ಷ ಕಡಮಜಲು ಸುಭಾಷ್ ರೈ, ಗ್ರಾಮ ಸಾಹಿತ್ಯ ಸಂಭ್ರಮ ಸಂಚಾಲಕ ನಾರಾಯಣ ಕುಂಬ್ರ, ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ, ಚಿಗುರೆಲೆ ಸಾಹಿತ್ಯ ಬಳಗದ ಶ್ರೀಕಲಾ ಕಾರಂತ್, ವಿದ್ಯಾಶ್ರೀ ರೈ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net