More

    ಪ್ರತಿಭೆಗೆ ಪ್ರೋತ್ಸಾಹ ನೀಡಿದಲ್ಲಿ ಸಾಧನೆ

    ಶಿಕಾರಿಪುರ: ಮಕ್ಕಳಿಗೆ ಶಿಕ್ಷಣದ ಜತೆಯಲ್ಲಿ ದೇಶಪ್ರೇಮ ಮತ್ತು ಸಂಸ್ಕಾರ ಕಲಿಸಬೇಕು. ಅವರ ಪ್ರತಿಭೆ ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಿದಲ್ಲಿ ಉನ್ನತ ಸಾಧನೆ ಹೊರಹೊಮ್ಮಲು ಸಾಧ್ಯ ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು.

    ಬುಧÀವಾರ ಸಮೀಪದ ಹೊಸ ಮುಗುಳಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಂವೈ ಸೇವಾ ಟ್ರಸ್ಟ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಉಚಿತ ನೋಟ್‌ಬುಕ್ ವಿತರಿಸಿ ಮಾತನಾಡಿದರು.
    ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಿಗೆ ಸ್ಪಧೆೆð ನೀಡುತ್ತಿದ್ದಾರೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಯಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವುದು ಶ್ಲಾಘನೀಯ. ಪಾಲಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ವಿನ ಗಮನ ನೀಡಬೇಕು ಎಂದರು.
    ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ನೀಡಬೇಕು. ಸಾಕಷ್ಟು ಗ್ರಾಮೀಣ ಕ್ರೀಡೆಗಳು ನಶಿಸಿಹೋಗುತ್ತಿದ್ದು ಜುಡೋ, ಕರಾಟೆ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಶಿಕಾರಿಪುರ ತಾಲೂಕಿನ ವಿದ್ಯಾರ್ಥಿಗಳು ರಾಜ್ಯ, ರಾಷ್ಟಿçÃಯ, ಅಂತಾರಾಷ್ಟಿçÃಯ ಮಟ್ಟದಲ್ಲಿ ಗಮನಸೆಳೆದಿz್ದÁರೆ. ಹೀಗಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡುವ ಅಗತ್ಯವಿದೆ ಎಂದರು.
    ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಕ್ಲಾಪುರ ಹನುಮಂತಪ್ಪ, ನಿಂಬೆಗೊAದಿ ಸಿದ್ದಲಿಂಗಪ್ಪ, ಬಿಇಒ ಶಶಿಧರ್, ಹಾಲೇಶಪ್ಪ, ಶಿಕ್ಷಣ ಸಂಯೋಜಕ ಸೋಮಶೇಖರಪ್ಪ, ಶಿವಕುಮಾರ್, ಶಂಕ್ರಪ್ಪ, ಮುಖ್ಯಶಿಕ್ಷಕ ಹೆಗಡೆ ಮತ್ತು ಸಹಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts