ಕಾಸರಗೋಡು: ತಿರುವನಂತಪುರದಲ್ಲಿ ನಡೆದ ರಾಜ್ಯಮಟ್ಟದ ಶಾಲಾ ಕಲೋತ್ಸವದ ಸಂಸ್ಕೃತ ಕಥಾ ರಚನೆಯಲ್ಲಿ, ವಿಶ್ಮಿತಾ ಬಜಕೂಡ್ಲು, ಕನ್ನಡ ಕವಿತಾ ರಚನೆಯಲ್ಲಿ ತನ್ವಿ ‘ಎ’ ಶ್ರೇಣಿಯೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಪೆರ್ಲ ಶ್ರೀಸತ್ಯನಾರಾಯಣ ಪ್ರೌಢಶಾಲೆ ವಿದ್ಯಾರ್ಥಿಗಳು.
ರಾಜ್ಯಮಟ್ಟದ ಕಲೋತ್ಸವದ ಪ್ರೌಢಶಾಲಾ ವಿಭಾಗದ ಬಾಲಕರ ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಪ್ರದ್ಯುಮ್ನ ಶರ್ಮ ಉಪ್ಪಂಗಳ ‘ಎ’ ಶ್ರೇಣಿಯೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಬದಿಯಡ್ಕದ ನವಜೀವನ ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿ.