More

    ಮನಸ್ಸನ್ನು ಹತೋಟಿಗೆ ತಂದರೆ ಸಾಧನೆ

    ಮಳವಳ್ಳಿ: ವಿದ್ಯಾರ್ಥಿಗಳು ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಂಡು ಶ್ರಮವಹಿಸಿ ವ್ಯಾಸಂಗದತ್ತ ಗಮನ ನೀಡಿದರೆ ಸಾಧನೆ ಸಾಧ್ಯ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಬಿ.ಜಿ.ಮಹೇಶ್ ಸಲಹೆ ನೀಡಿದರು.

    ಪಟ್ಟಣದ ಭಗವಾನ್ ಬುದ್ಧ ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ ಆವರಣದಲ್ಲಿ ಸೋಮವಾರ ಕಸಾಪ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಪಡೆಯಬೇಕೆಂಬ ಗುರಿ ಇಟ್ಟುಕೊಂಡು ಓದಿನ ದಿನಗಳಲ್ಲಿ ಏಕಾಗ್ರತೆ ಕಾಯ್ದುಕೊಂಡರೇ ಖಂಡಿತಾ ಯಶಸ್ಸು ಸಾಧ್ಯ. ಕ್ಷಣಿಕ ಸುಖಕ್ಕೆ ಮಾರುಹೋಗದೆ ಕಲಿಕೆಯತ್ತ ಆಸಕ್ತಿ ವಹಿಸುವುದರಿಂದ ಭವಿಷ್ಯದ ಜೀವನದಲ್ಲಿ ಎಲ್ಲಾ ರೀತಿ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬಹುದು ವಿದ್ಯಾರ್ಥಿಗಳಿ ಕಿವಿಮಾತು ಹೇಳಿದರು.

    ಅವಿಭಕ್ತ ಕುಟುಂಬಗಳು ಮರೆಯಾಗುತ್ತಿರುವ ದಿನಗಳಲ್ಲಿ ನಮ್ಮ ಪೂರ್ವಜರನ್ನು ನೆನಪು ಮಾಡಿಕೊಳ್ಳಲು ಕಸಾಪ ವತಿಯಿಂದ ದತ್ತಿ ಉಪನ್ಯಾಸ ನಡೆಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಹಿರಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಾನವೀಯ ಸಂಬಂಧಗಳು ಸಡಿಲಗೊಳ್ಳುತ್ತಿರುವುದು ನೋವಿನ ಸಂಗತಿ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಗವಾನ್ ಬುದ್ಧ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ನಮ್ಮ ಹಿರಿಯರ ತತ್ವ ಆದರ್ಶಗಳ ಮೈಗೂಡಿಸಿಕೊಂಡು ಉತ್ತಮ ಜೀವನ ಕಟ್ಟಿಕೊಂಡಿದ್ದೇನೆ. ನಿಮಗೆ ದಾರಿ ದೀಪವಾದ ಪಾಲಕರ ಶ್ರಮವನ್ನು ನೆನೆದು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದರು.

    ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಕೃಷ್ಣೇಗೌಡ ಉಸ್ಕೂರು ಮಾತನಾಡಿ, ನಮ್ಮ ಹಿರಿಯರ ಸ್ಮರಣೆಗಾಗಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದತ್ತಿ ಉಪನ್ಯಾಸ ಹಮ್ಮಿಕೊಳ್ಳಲಾಗುತ್ತಿದೆ. ರಾಜ್ಯದಲ್ಲೇ ಅತಿ ಹೆಚ್ಚು ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಸುತ್ತಿರುವುದು ಮಂಡ್ಯ ಜಿಲ್ಲೆಯಲ್ಲಿ ಎಂದರು.
    ಕಾರ್ಯಕ್ರಮದಲ್ಲಿ ಕಸಾಪ ತಾಲೂಕು ಅಧ್ಯಕ್ಷ ಚೇತನ್ ಕುಮಾರ್, ಶಿವರಾಜು, ಚುಂಚಯ್ಯ, ಕಾಲೇಜು ಪ್ರಾಂಶುಪಾಲರಾದ ಬಾಲಸುಬ್ರಮಣ್ಯ, ಶಿವಶಂಕರ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts