More

  ಮಾರಿಕಾಂಬಾ ಪ್ರೌಢ ಶಾಲೆ ಮಕ್ಕಳ ಸಾಧನೆ

  ಶಿರಸಿ: ಇಲ್ಲಿನ ಮಾರಿಕಾಂಬಾ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

  ಜೊಯಿಡಾ ತಾಲೂಕಿನ ರಾಮನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 14 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಧನ್ಯ ನಾಗರಾಜ್ ನಾಯ್್ಕ 100 ಮೀಟರ್ ಓಟ ಸ್ಪರ್ಧೆಯಲ್ಲಿ ಪ್ರಥಮ, ದರ್ಶನ್ ಹೆಗಡೆ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಕೆ. ಶಿರಹಟ್ಟಿ, ಪ್ರಶಾಂತ ಗಾಂವಕರ್ ಮತ್ತು ಯಮನಾ ನಾಯಕ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಎಸ್​ಡಿಎಂಸಿ ಅಧ್ಯಕ್ಷ ಭೀಮಣ್ಣ ನಾಯ್ಕ, ಉಪ ಪ್ರಾಚಾರ್ಯ ಯಜ್ಞೇಶ್ವರ ನಾಯ್ಕ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts