More

    ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳ ಸಾಧನೆ

    ಚಾಮರಾಜನಗರ: ಹನೂರು ಪಟ್ಟಣದ ಶ್ರೀ ಮಲೆಮಹದೇಶ್ವರ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಹನೂರಿನ ಶ್ರೀ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಜಯಗಳಿಸಿದ್ದಾರೆ.

    ಖೋ ಖೋ ಪಂದ್ಯದಲ್ಲಿ ಬಾಲಕ, ಬಾಲಕಿಯರ ತಂಡ ದ್ವಿತೀಯ ಸ್ಥಾನ, ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿದೆ. 5000 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರವೀಣ್ ಪ್ರಥಮ, 1,500 ಮೀ. ಸಿಂಧು ಹಾಗೂ 400 ಮೀ. ಸೃಜನ್ ಪ್ರಥಮ, 200 ಮೀ. ರಮೇಶ್ ದ್ವಿತೀಯ, 600 ಮೀ. ಕಾರ್ತಿಕ್‌ರಾಜ್ ತೃತೀಯ ಹಾಗೂ 200 ಮೀಟರ್ ಓಟದಲ್ಲಿ ಪದ್ಮಾವತಿ ತೃತೀಯ ಸ್ಥಾನ ಪಡೆದಿದ್ದಾರೆ.

    ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿರುವ ಸೃಜನ್ ಗುಂಡು ಎಸೆತದಲ್ಲೂ ದ್ವಿತೀಯ ಸ್ಥಾನ ಗಳಿಸಿದ್ದಾನೆ. ಪವನ್‌ಕುಮಾರ್ ಸಹ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 4x100 ಹಾಗೂ 4x400 ಮೀ. ಓಟದ ಸ್ಪರ್ಧೆಯಲ್ಲಿ ಬಾಲಕ, ಬಾಲಕಿಯರ ತಂಡ ದ್ವಿತೀಯ ಸ್ಥಾನ ಗಳಿಸಿದೆ.

    ಕ್ರೀಡಾಕೂಟದಲ್ಲಿ ಜಯಗಳಿಸಿ ಕಾಲೇಜಿಗೆ ಕೀರ್ತಿ ತಂದು ಕೊಟ್ಟ ವಿದ್ಯಾರ್ಥಿಗಳು ಹಾಗೂ ಕಾರಣಕರ್ತರಾದ ದೈಹಿಕ ಶಿಕ್ಷಣ ನಿರ್ದೇಶಕ ನಾಗಪ್ಪ ಅವರನ್ನು ಸಂಸ್ಥೆ ಅಧ್ಯಕ್ಷೆ ಉಮಾ ರಾಜೇಂದ್ರನ್, ಕಾರ್ಯದರ್ಶಿ ಸುರೇಶ್‌ನಾಯ್ಡು, ಸಂಚಾಲಕ ರಾಜೇಂದ್ರನ್, ಖಜಾಂಚಿ ಶ್ರೀದೇವಿ, ಪ್ರಾಂಶುಪಾಲ ಮಧುಸೂದನ್ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts