ಸಾಧನೆಗೆ ನಿರಂತರ ಪ್ರಯತ್ನ ಅಗತ್ಯ

ಹಾಸನ: ಜೀವನದಲ್ಲಿ ಏನಾದರೂ ಸಾಧಿಸಬೇಕೆಂದು ಕನಸು ಕಾಣುವುದರ ಜತೆಗೆ ಅದರ ಸಾಕಾರಕ್ಕೆ ನಿರಂತರ ಪ್ರಯತ್ನ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್.ವಿಜಯಪ್ರಕಾಶ್ ಸಲಹೆ ನೀಡಿದರು.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಭಾನುವಾರ ವಿವೇಕ ಬ್ಯೂರೋ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಒಂದು ದಿನದ ಉಚಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲರೂ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು. ಆ ಮೂಲಕ ಸದೃಢ ಸರ್ಕಾರ ರಚಿಸಲು ಸಹಕರಿಸಬೇಕು ಎಂದರು.

ತರಬೇತಿ ಸಂಸ್ಥೆಯ ತರಬೇತುದಾರ ಬಿ.ಶಿವಕುಮಾರ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಹಿಂಜರಿಕೆ ಇಟ್ಟುಕೊಳ್ಳಬಾರದು. ಅಲ್ಲದೆ ಕೇಂದ್ರ ಹಾಗೂ ರಾಜ್ಯ ಅನೇಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು ಸತತ ಅಧ್ಯಯನದ ಮೂಲಕ ನೌಕರಿ ಪಡೆಯಬೇಕು ಎಂದು ಕಿವಿಮಾತು ಹೇಳಿದರು.
ಇದೇ ವೇಳೆ ಕಡ್ಡಾಯ ಮತದಾನದ ಪ್ರಮಾಣ ವಚನ ಬೋಧಿಸಲಾಯಿತು.

ಕಾರ್ಯಕ್ರಮದ ವ್ಯವಸ್ಥಾಪಕ ಮಳಲಿ ಹರೀಶ್ ಕುಮಾರ್, ವಾರ್ತಾಧಿಕಾರಿ ವಿನೋದ್‌ಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ಶಿವಲಿಂಗಪ್ಪ ಎನ್.ಕುಂಬಾರ ಇದ್ದರು.

Leave a Reply

Your email address will not be published. Required fields are marked *