More

    ಸಮಸ್ಯೆಗಳ ನಿವಾರಣೆಗೆ ಸಾಧನೆಗಳು ಶಕ್ತಿ ತುಂಬುತ್ತವೆ

    ರಾಯಚೂರು: ಮಹಿಳೆಯರು ತಮ್ಮ ಸಮಸ್ಯೆಗಳನ್ನು ನಿವಾರಿಸುವಲ್ಲಿ ಅವರ ಸಾಧನೆಗಳೇ ಅವರಿಗೆ ಶಕ್ತಿ ತುಂಬುತ್ತಿದ್ದು, ಅದಕ್ಕೆ ಹಲವಾರು ಮಹಿಳಾ ಸಾಧಕಿಯರು ಸಾಕ್ಷಿಯಾಗಿದ್ದಾರೆ ಎಂದು ಮಾನ್ವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕಿ ಸಿ.ಎಚ್.ಶೋಭಾ ಹೇಳಿದರು.
    ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶದಿಂದ ಭಾರತದಲ್ಲಿ ಮಹಿಳೆಯರ ಸ್ಥಿತಿಗತಿ ಕುರಿತು ಮಂಗಳವಾರ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿನಿಯರು ತಮ್ಮ ಸಮಸ್ಯೆಗಳನ್ನು ಅರಿತುಕೊಂಡು ಅವುಗಳನ್ನು ಎದುರಿಸುವ ಆತ್ಮಸ್ಥೆರ್ಯ, ಜ್ಞಾನ ಬೆಳೆಸಿಕೊಳ್ಳಬೇಕು ಎಂದರು.
    ಅಧ್ಯಕ್ಷತೆ ವಹಿಸಿ ಕಾಲೇಜು ಪ್ರಾಚಾರ್ಯೆ ಡಾ.ಪುಷ್ಪ ಮಾತನಾಡಿ, ಮಹಿಳೆಯರು ಸಬಲರಾದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಮುನ್ನಡೆಯಲು ಸಾಧ್ಯವಾಗುತ್ತದೆ. ಪ್ರಸ್ತುತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೇಶವನ್ನು ಆರ್ಥಿಕವಾಗಿ ಮುನ್ನಡೆಸುವ ಕೆಲಸವನ್ನು ಮಾಡುತ್ತಿದ್ದು, ಅವರಲ್ಲಿನ ಆತ್ಮಸ್ಥೆರ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
    ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ಸಿ.ಕೆ.ಜ್ಯೋತಿ, ಡಾ.ಶರಣಗೌಡ, ಡಾ.ಸುಗುಣಾ, ಸುಮಿತ್ರಾ ಪ್ಯಾಟಿ, ಉಮಾದೇವಿ, ಡಾ.ರಶೀದಾ ಪರ್ವಿನ್, ಡಾ.ಪ್ರಸನ್ನಕುಮಾರ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts