ಮಣೂರು ಶಾಲಾ ವಿದ್ಯಾರ್ಥಿಗಳ ಸಾಧನೆ

manuru
ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಮಣೂರು ಪಡುಕರೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
Published on

ಕೋಟ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬ್ರಹ್ಮಾವರ ವಲಯ ಸೇಂಟ್ ಅಂತೋನಿ ಆಂಗ್ಲ ಮಾಧ್ಯಮ ಶಾಲೆ ಸಾಸ್ತಾನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಮಣೂರು ಪಡುಕರೆಯ ವಿದ್ಯಾರ್ಥಿಗಳಾದ ಅನುಶ್ರೀ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಹರ್ಷಿತಾ ಜಿ. ಸಾಲಿಯಾನ್ ರಂಗೋಲಿಯಲ್ಲಿ ಪ್ರಥಮ, ಪೂರ್ವಿ ಪ್ರಬಂಧದಲ್ಲಿ ಪ್ರಥಮ ಮತ್ತು ಸಮೃದ್ಧಿ ಎಸ್. ಮೊಗವೀರ ಕನ್ನಡ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ಗೀತಾನಂದ ಫೌಂಡೇಶನ್ ಮತ್ತು ಶಾಲಾಭಿವೃದ್ಧಿ ಸಮಿತಿ ಮುಖ್ಯ ಶಿಕ್ಷಕರು, ಸಹಶಿಕ್ಷಕರ ಸಂಘ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net