ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಡಾನ್ ಬಾಸ್ಕೊ ಪದವಿ ಪೂರ್ವ ಕಾಲೇಜು ಚಿತ್ತಾಪುರ ಆಶ್ರಯದಲ್ಲಿ ಯಾದಗಿರಿಯಲ್ಲಿ ನಡೆದ ರಾಜ್ಯಮಟ್ಟದ ಟೆನ್ನಿಕಾಯ್ಟಿ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡ ದ್ವಿತೀಯ ಸ್ಥಾನ ಪಡೆಯಿತು. ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ವೈಷ್ಣವಿ, ರಿಷಾ ಮತ್ತು ಅಂಶು ಉಡುಪಿ ಜಿಲ್ಲಾ ತಂಡದಿಂದ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಉಡುಪಿ ಜಿಲ್ಲಾ ಬಾಲಕರ ತಂಡವನ್ನು ಪ್ರತಿನಿಧಿಸಿದ್ದ ವಿದ್ಯಾರ್ಥಿಗಳಾದ ದೃಶ್ಯ, ಸಾಕೇತ್, ಅಕ್ಷಯ್ ಉತ್ತಮ ಪ್ರದರ್ಶನ ನೀಡಿದ್ದಾರೆ.