ದೇಹ ದಂಡನೆಯಿಂದ ಆರೋಗ್ಯವಂತ ಶರೀರ ಪ್ರಾಪ್ತಿ

09 ylp 01 (sports)
Published on

ಯಲ್ಲಾಪುರ ದೇಹ ದಂಡಿಸಿದರೆ ಆರೋಗ್ಯವಂತ ಶರೀರ ನಮ್ಮದಾಗುತ್ತದೆ. ಅದಕ್ಕೆ ಕ್ರೀಡೆ ಉತ್ತಮ ಮಾಧ್ಯಮ ಎಂದು ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಹೇಳಿದರು.


ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾ.ಪಂ, ಪ.ಪಂ, ತಾಲೂಕು ಯುವ ಒಕ್ಕೂಟಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.


ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ ಅಧ್ಯಕ್ಷತೆ ವಹಿಸಿದ್ದರು.

ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜೇಯ ನಾಯಕ, ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿ ವಿಠ್ಠು ಶೆಳಕೆ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಮಂಜುನಾಥ ಆಗೇರ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ವೆಂಕಟೇಶ ಪಾಲನಕರ್, ಯುವಜನ ಸೇವಾ ಕ್ರೀಡಾಧಿಕಾರಿ ನಾರಾಯಣ ನಾಯಕ, ಪತ್ರಕರ್ತರಾದ ಸುಬ್ರಾಯ ಬಿದ್ರೆಮನೆ, ನಾಗರಾಜ ಮದ್ಗುಣಿ ಇತರರಿದ್ದರು. ವಿನೋದ ನಾಯಕ, ಸದಾನಂದ ನಾಯಕ, ಗಣಪತಿ ಗೌಡ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net