More

    ದರೋಡೆಗೆ ನೆರವು, ಗ್ರಾಪಂ ಮಾಜಿ ಸದಸ್ಯ ಸೆರೆ 

    ಮಂಗಳೂರು: ಮೂಡುಬಿದಿರೆ, ಮುಲ್ಕಿ, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನ ಸವಾರರನ್ನು ಅಡ್ಡಗಟ್ಟಿ ದ್ವಿಚಕ್ರ ವಾಹನ, ಹಣ ಮತ್ತಿತರ ವಸ್ತುಗಳನ್ನು ಸುಲಿಗೆ, ದರೋಡೆ ಮಾಡುತ್ತಿದ್ದ ಪ್ರಕರಣದ ಮತ್ತೊಬ್ಬ ಆರೋಪಿ, ಪುತ್ತೂರಿನ ಕೆದಂಬಾಡಿ ಗ್ರಾಮದ ಅಬ್ದುಲ್ ಬಶೀರ್(40) ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

    ಬಂಧನಕ್ಕೆ ಒಳಗಾಗಿರುವ ಆರೋಪಿಗಳಿಗೆ ಈತ ಕೃತ್ಯ ಎಸಗಲು ಬೇಕಾದ ಹಣಕಾಸಿನ ನೆರವು ನೀಡುತ್ತಿದ್ದ ಎನ್ನಲಾಗಿದೆ. ಈತನ ವಿರುದ್ಧ ಮನೆಯೊಂದರಿಂದ ದರೋಡೆಗೆ ಸಂಚು ರೂಪಿಸಿದ ಪ್ರಕರಣವು ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿದೆ. ಈತ ಕೆದಂಬಾಡಿ ಗ್ರಾಪಂ ಮಾಜಿ ಸದಸ್ಯ. 2018ರ ವಿಧಾನಸಭೆ ಚುನಾವಣೆಗೆ ಈತ ಪುತ್ತೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ 7, ದ.ಕ.ಜಿಲ್ಲಾ ಎಸ್ಪಿ ವ್ಯಾಪ್ತಿಯ 8, ಹಾಸನ ಜಿಲ್ಲೆಯ 2, ಚಿಕ್ಕಮಗಳೂರು ಜಿಲ್ಲೆಯ 3, ಕೊಡಗು ಜಿಲ್ಲೆಯ 5, ಉಡುಪಿ ಜಿಲ್ಲೆಯ 2, ಬೆಂಗಳೂರು ನಗರದ 1 ಸಹಿತ 28 ದರೋಡೆ, ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೆ 15 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 16ನೆ ಆರೋಪಿಯಾದ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಉಪಾಯುಕ್ತರಾದ ಹರಿರಾಮ್ ಶಂಕರ್, ವಿನಯ ಗಾಂವ್ಕರ್ ಮಾರ್ಗದರ್ಶನದಲ್ಲಿ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ನೇತೃತ್ವದಲ್ಲಿ ಮೂಡುಬಿದಿರೆ ಠಾಣೆಯ ಇನ್‌ಸ್ಪೆಕ್ಟರ್ ದಿನೇಶ್ ಕುಮಾರ್ ಬಿ.ಎಸ್. ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts