More

    ಕಾಯ್ದೆ ತಿದ್ದುಪಡಿಗೆ ಒತ್ತಾಯ

    ಬೆಳಗಾವಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಪಿಎಂಸಿ ಕಾಯ್ದೆ ಹಿಂಪಡೆಯಬೇಕು. ವಿದ್ಯುತ್ ಖಾಸಗೀಕರಣ ತಡೆಯಬೇಕು ಎಂದು ಒತ್ತಾಯಿಸಿ ಗುರುವಾರ ರೈತ ಸಂಘ, ಹಸಿರು ಸೇನೆಯ ರೈತ ಮುಖಂಡರು ನಗರದ ಚನ್ನಮ್ಮ ವೃತ್ತದಲ್ಲಿ ಜಾನುವಾರು ಸಮೇತ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

    ರೈತರಿಗೆ ಮಾರಕವಾಗಿರುವ ಈ ಕಾಯ್ದೆ ತಡೆಹಿಡಿಯಬೇಕು. ವಿದ್ಯುತ್ ಖಾಸಗೀಕರಣಕ್ಕೆ ಮುಂದಾಗಿರುವ ಸರ್ಕಾರ ನಿರ್ಧಾರ ಕೈಬಿಡಬೇಕು. ರೈತರ ಸಾಲ ಮನ್ನಾ ಮಾಡಬೇಕು. ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಬಾಕಿ ಬಿಲ್ ರೈತರ ಖಾತೆಗೆ ಜಮೆ ಮಾಡಿಸಬೇಕು. ಬೆಳಗಾವಿ-ಹಲಗಾ-ಮಚ್ಛೆ, ಬೈಪಾಸ್ ರಸ್ತೆ ಕಾಮಗಾರಿ ಸಂಪೂರ್ಣ ರದ್ದುಗೊಳಿಸಬೇಕು. ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2017-18ರಲ್ಲಿ ಪಡೆದ ಸಾಲ ಮನ್ನಾ ಮಾಡಬೇಕು. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ಅಧಿಕಾರಿಗಳು ಒತ್ತಾಯ ಪೂರ್ವಕವಾಗಿ ರೈತರ ಮನೆಗೆ ತೆರಳಿ ಸಾಲ ವಸೂಲಿ ಮಾಡುತ್ತಿರುವುದನ್ನು ನಿಲ್ಲಿಸಬೇಕು. ಇಂಧನ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು. ಸತ್ತೆಪ್ಪ ಮಲ್ಲಾಪುರಿ, ತ್ಯಾಗರಾಜ ಕದಂ, ಮುತ್ತೆಪ್ಪ ಬಾಗಣ್ಣವರ, ರಾಜು ಎಂ., ಕುಬೇಂದ್ರ ಗಾಣಿಗೇರ, ರಮೇಶ ಮಡಿವಾಳ, ಮಹಾದೇವ ಮಡಿವಾಳ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts