More

    ಕಾಯ್ದೆ ತಿದ್ದುಪಡಿಗೆ ವಿರೋಧ

    ಮುನವಳ್ಳಿ: 2003ರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ಮಾಡಲು ಹೊರಟಿರುವುದು ಹಾಗೂ ವಿದ್ಯುತ್ ಕ್ಷೇತ್ರದಲ್ಲಿ ಹೊರ ಗುತ್ತಿಗೆ, ಖಾಸಗೀಕರಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಪಟ್ಟಣದ ಹೆಸ್ಕಾಂ, ಕೆಪಿಟಿಸಿಎಲ್ ನೌಕರರ ಸಂಘ ಮತ್ತು ಅಸೋಸಿಯೇಷನ್ ಸದಸ್ಯರು ಕಪ್ಪು ಪಟ್ಟಿ ಧರಿಸಿ ಹೆಸ್ಕಾಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಕಾಯ್ದೆ ತಿದ್ದುಪಡಿಯಿಂದ ಕಾರ್ಮಿಕರು, ರೈತರು ಹಾಗೂ ಜನ ಸಾಮಾನ್ಯರಿಗೆ ಹೊರೆಯಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ಕಾಯ್ದೆ ತಿದ್ದುಪಡಿ ನಿರ್ಧಾರ ಕೈಬಿಡಬೇಕು ಎಂದು ಒತ್ತಾಯಿಸಿದರು. ಮುನವಳ್ಳಿ ಹೆಸ್ಕಾಂ ಕಚೇರಿ ಶಾಖಾಧಿಕಾರಿ, ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಎನ್.ಬಿ.ಕುಂಬಾರ, ರವಿ ಭಜಂತ್ರಿ, ಪ್ರಾಥಮಿಕ ಸಮಿತಿ ಅಧ್ಯಕ್ಷ ಶಿವು ಕರಾಳೆ, ಎಂ.ಪಿ.ತೋರಣಗಟ್ಟಿ, ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸಂಘದ ತಾಲೂಕಾಧ್ಯಕ್ಷ ನಾರಾಯಣ ಕದಂ, ಶಿವು ಮಠಪತಿ ಹಾಗೂ ಸಂಘದ ಸದಸ್ಯರು, ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ಮೂಡಲಗಿ ವರದಿ: ಕೇಂದ್ರ ಸರ್ಕಾರ 2003ರ ವಿದ್ಯುತ್ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿರೋಧಿಸಿ ಪಟ್ಟಣದ ಹೆಸ್ಕಾಂ ಹಾಗೂ ಕೆಪಿಟಿಸಿಎಲ್ ನೌಕರರ ಸಂಘದ ವತಿಯಿಂದ ಕಪ್ಪು ಪಟ್ಟಿ ಧರಿಸಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಹೆಸ್ಕಾಂ ಶಾಖಾಧಿಕಾರಿ ಪಿ.ಆರ್.ಯಡಹಳ್ಳಿ, ಆರ್.ಡಿ.ಪಿಡಾಯಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts