More

    ಕಾಯ್ದೆ ಕೈ ಬಿಡದಿದ್ದರೆ ಉಗ್ರ ಹೋರಾಟ

    ಬೆಳಗಾವಿ: ಉಭಯ ಸರ್ಕಾರಗಳು ಜಾರಿಗೆ ತರುತ್ತಿರುವ ಭೂ ಸುಧಾರಣೆ ಕಾಯ್ದೆ ವಿರೋಧಿಸಿ ಸೋಮವಾರ ನಗರದ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ರ‌್ಯಾಲಿ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

    ಉದ್ಯಮಿಗಳು, ಶ್ರೀಮಂತರ ಅನುಕೂಲಕ್ಕಾಗಿ ಉಭಯ ಸರ್ಕಾರಗಳು ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಲು ಮುಂದಾಗಿವೆ. ಮಳೆ ಹಾಗೂ ಕೋವಿಡ್-19ನಿಂದಾಗಿ ಈಗಾಗಲೇ ರೈತರು ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ. ಸರ್ಕಾರ ಅವರ ರಕ್ಷಣೆಗೆ ನಿಲ್ಲುವ ಬದಲಾಗಿ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದು ಬೇಸರದ ವಿಚಾರ. ಸರ್ಕಾರ ತಕ್ಷಣ ಕಾಯ್ದೆ ಹಿಂಪಡೆಯಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಕಾಯ್ದೆಯಿಂದ ರೈತರಿಗೆ ಹಾನಿ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಆರ್ಥಿಕವಾಗಿ ಹಾನಿಯಾಗಲಿದೆ. ಒಬ್ಬ ಉದ್ಯಮಿ ಅಥವಾ ಶ್ರೀಮಂತ ವ್ಯಕ್ತಿಗಳು ಕೈಗಾರಿಕೆ ಸ್ಥಾಪನೆ ಉದ್ದೇಶಕ್ಕಾಗಿ ಫಲವತ್ತಾದ ಕೃಷಿ ಜಮೀನು ಖರೀದಿಸಬಹುದು. ಒಂದು ವೇಳೆ ರೈತರು ನೀಡದಿದ್ದರೆ ಕಾಯ್ದೆಯಡಿ ಭೂಮಿ ವಶಪಡಿಸಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಸಣ್ಣ ಮತ್ತು ಮಧ್ಯಮ ವರ್ಗದ ರೈತರನ್ನು ಕೃಷಿ ವೃತ್ತಿಯಿಂದ ಹೊರ ಹಾಕುವ ಕೆಲಸವನ್ನು ಸರ್ಕಾರಗಳು ಮಾಡುತ್ತಿವೆ ಎಂದು ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ಆರೋಪಿಸಿದರು.

    ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಮಾಳಗಿ, ರಮೇಶ ಮೋಕಾಶಿ, ಮಂಜು ಕಾಂಬಳೆ, ಮಂಜು ತಡಸೂಲರ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts