More

    ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ

    ಶಿವಮೊಗ್ಗ: ಎಲ್ಲ ಅಧಿಕಾರಿಗಳು ಒಂದು ತಂಡವಾಗಿ ನಿಷ್ಪಕ್ಷಪಾತ, ಪಾರದರ್ಶಕತೆ ಮತ್ತು ಪ್ರಾಮಾಣಿಕವಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

    ಲೋಕಸಭೆ ಚುನಾವಣೆ ಕಾರ್ಯಕ್ಕೆ ನಿಯೋಜಿತರಾದ ಎಫ್‌ಎಸ್‌ಟಿ, ಎಸ್‌ಎಸ್‌ಟಿ, ವಿವಿಟಿ, ಇಇಒ, ವಿಎಸ್ ಸಿಬ್ಬಂದಿಗೆ ಮಂಗಳವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ಚುನಾವಣೆ ಕಾರ್ಯದಲ್ಲಿ ಭಾಗಿಯಾಗಲು ಎಲ್ಲರಿಗೂ ಅವಕಾಶ ದೊರೆಯುವುದಿಲ್ಲ. ಈ ಅವಕಾಶ ದೊರೆತ ನಾವೇ ಅದೃಷ್ಟವಂತರು ಎಂದು ತಿಳಿಸಿದರು.
    ಚುನಾವಣಾ ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಹಾಜರಾಗಬೇಕು. ಲಭ್ಯವಿರುವ ಕಡೆಗಳಲ್ಲಿ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಬೇಕು. ಯಾವುದೇ ನಿರ್ಲಕ್ಷೃವನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ನಾನು, ಎಸ್ಪಿ ಹಾಗೂ ಜಿಪಂ ಸಿಇಒ ಎಲ್ಲ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡುತ್ತೇವೆ. ಚೆಕ್‌ಪೋಸ್ಟ್‌ಗಳಲ್ಲಿ ಬಸ್‌ಗಳನ್ನೂ ತಪಾಸಣೆ ಮಾಡಬೇಕೆಂದರು. ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಮಾಸ್ಟರ್ ಟ್ರೈನರ್‌ಗಳಾದ ಶಿವಕುಮಾರ್, ರವಿಚಂದ್ರ ನಾಯ್ಕ ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts