

ಕುಂದಾಪುರ: ಮಕ್ಕಳಿಗೆ ಒತ್ತಡ ಹೇರದೆ ಅವರ ಬೇಕು ಬೇಡ ಅರಿತು, ಸ್ನೇಹಿತರಂತೆ ವರ್ತಿಸಬೇಕು. ಪರೀಕ್ಷಾ ಸಂದರ್ಭ ಮಕ್ಕಳಲ್ಲಿ ಇದ್ದ ಭಯದ ವಾತಾವರಣ ತೊಡೆದು ಹಾಕಿ, ಸ್ವಚ್ಛಂದವಾಗಿ ಓದುವ ಪರಿಸರ ನಿರ್ಮಿಸಬೇಕು ಎಂದು ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ ಹೇಳಿದರು.
ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶುಕ್ರವಾರ ‘ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರ’ ಮಾಹಿತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಸಂಸ್ಥೆ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಶ್ರೀ ವೆಂಕಟರಮಣ ಪದವಿ ಪೂರ್ವ ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ಪ್ರಾಥಮಿಕ ವಿಭಾಗ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸ್ವಾಗತಿಸಿದರು. ಶಿಕ್ಷಕ ಮಾಧವ ವಂದಿಸಿದರು. ಶಿಕ್ಷಕಿ ಆಶಾ ಬಾಯಿ ನಿರೂಪಿಸಿದರು.