More

    ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಕ್ರಮಕೈಗೊಳ್ಳಿ

    ರಾಯಚೂರು: ಜಿಲ್ಲೆಯಲ್ಲಿನ ಸರ್ಕಾರಿ ಕಚೇರಿ, ಉದ್ಯಮ, ಸ್ವಾಯತ್ತ ಸಂಸ್ಥೆ, ಕೈಗಾರಿಕೆಗಳು ಸೇರಿದಂತೆ ಎಲ್ಲ ವಲಯಗಳಲ್ಲಿನ ಅಧಿಕಾರಿಗಳ ಪದನಾಮ ಫಲಕ ಹಾಗೂ ಕಚೇರಿಯ ನಾಮಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೂಚಿಸಿದರು.
    ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಹಾಗೂ ಕನ್ನಡ ಭಾಷಾ ಅಭಿವೃದ್ಧಿ ತಿದ್ದುಪಡಿ ವಿಧೇಯಕ 2024 ಜಾರಿಗೊಳಿಸುವ ಕುರಿತು ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ರಸ್ತೆ, ಬಡಾವಣೆಗಳ ಹೆಸರುಗಳು ಸೇರಿದಂತೆ ಸ್ಥಳೀಯ ಪ್ರಾಧಿಕಾರಗಳ ಮೇಲ್ವಿಚಾರಣೆಯಲ್ಲಿ ಹಾಕಲಾಗಿರುವ ಫಲಕಗಳ ಮೇಲ್ಭಾಗದಲ್ಲಿ, ಟೆಂಡರ್ ಅಧಿಸೂಚನೆ, ಜಾಹೀರಾತು, ಅರ್ಜಿ ನಮೂನೆ, ಪ್ರಮಾಣ ಪತ್ರ ಸೇರಿದಂತೆ ಇನ್ನಿತರಗಳ್ಲಲಿ ಕನ್ನಡ ಬಳಕೆಗೆ ಆಯಾ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು.
    ಸರ್ಕಾರಿ ಇಲಾಖೆಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ಇ ಟೆಂಡರ್, ಇ ಆಡಳೀತ ಯೋಜನೆಗಳಲ್ಲಿ ಕನ್ನಡ ಬಳಕೆಗಾಗಿ ಸೌಲಭ್ಯ ಲಭ್ಯವಿರುವಂತೆ ಹಾಗೂ ಸರ್ಕಾರಿ, ಸ್ಥಳೀಯ ಪ್ರಾಧಿಕಾರ ಅಭಿವೃದ್ಧಿಪಡಿಸಿದ ವಿದ್ಯುನ್ಮಾನ ಅನ್ವಯಿಕೆಗಳು ಕನ್ನಡದಲ್ಲಿಯೂ ಇರಬೇಕು ಎಂದು ಚಂದ್ರಶೇಖರ ನಾಯಕ ಸೂಚಿಸಿದರು.
    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಹಾಯಕ ಆಯುಕ್ತ ಎಸ್.ಎಸ್.ಸಂಪಗಾವಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ್, ತಹಸೀಲ್ದಾರ್ ಸುರೇಶ ವರ್ಮಾ, ಕೈಗಾರಿಕೆ ಇಲಾಖೆ ಅಕಾರಿ ಬಸವರಾಜ ಯಂಕಂಚಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts