

ಮುಂಬೈ: 'ಕಲ್ಕಿ' ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಪ್ರಭಾಸ್ ಗೆ ಮತ್ತೊಂದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಓರ್ಮ್ಯಾಕ್ಸ್ ಮಾಧ್ಯಮ ಬಿಡುಗಡೆ ಮಾಡಿದ ದೇಶದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.
ಆರ್ಮ್ಯಾಕ್ಸ್ ಜೂನ್ತಿಂಗಳ ಜನಪ್ರಿಯ ತಾರೆಯರ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಭಾಸ್ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಅಗ್ರಸ್ಥಾನದಲ್ಲಿದ್ದ ಪ್ರಭಾಸ್ ಜೂನ್ನಲ್ಲೂ ಅದೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ 2ನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ತಮಿಳಿನ ವಿಜಯ್ 3ನೇ ಸ್ಥಾನದಲ್ಲಿದ್ದರೆ, ಅಲ್ಲು ಅರ್ಜುನ್ ಮತ್ತು ಎನ್ಟಿಆರ್ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.
ಇನ್ನು 6ನೇ ಸ್ಥಾನದಲ್ಲಿ ಮಹೇಶ್ಬಾಬು, 7ನೇ ಸ್ಥಾನದಲ್ಲಿ ಅಕ್ಷಯ್ ಕುಮಾರ್, 8ನೇ ಸ್ಥಾನದಲ್ಲಿ ಸಲ್ಮಾನ್ ಖಾನ್, 'ಗೇಮ್ ಚೇಂಜರ್' ಚಿತ್ರದ ಮೂಲಕ ಬರುತ್ತಿರುವ ರಾಮ್ ಚರಣ್ ಈ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದಾರೆ. ಹೃತಿಕ್ ರೋಷನ್ ಹತ್ತನೇ ಸ್ಥಾನದಲ್ಲಿದ್ದಾರೆ.
ಜನಪ್ರಿಯ ನಾಯಕಿಯರ ಪಟ್ಟಿಯಲ್ಲಿ ಆಲಿಯಾ ಭಟ್ ಅಗ್ರಸ್ಥಾನದಲ್ಲಿದ್ದರೆ, ಸಮಂತಾ ಮತ್ತು ದೀಪಿಕಾ ಪಡುಕೋಣೆ ನಂತರದ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.
ಪ್ರಭಾಸ್ ಅಭಿನಯದ ಕಲ್ಕಿ ಈ ಚಿತ್ರವು 1000 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಶಾರುಖ್ ಖಾನ್ ಅವರ 'ಜವಾನ್' 'ಬುಕ್ಮೆಶೋ' ದಾಖಲೆಯನ್ನು ಹಿಂದಿಕ್ಕಿದೆ.