ರಚನಾತ್ಮಕ ಪ್ರತಿಪಕ್ಷವಾಗಿ ಕಾರ್ಯನಿರ್ವಹಣೆ

ಕಡೂರು: ಕಡೂರು ಪುರಸಭೆಯಲ್ಲಿ ಕಾಂಗ್ರೆಸ್ ಬೆಂಬಲಿತ ಪುರಸಭೆ ಸದಸ್ಯರು ರಚನಾತ್ಮಕ ಪ್ರತಿ ಪಕ್ಷವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪುರಸಭೆ ಸದಸ್ಯ ತೋಟದಮನೆ ಮೋಹನ್ ಕುಮಾರ್ ತಿಳಿಸಿದರು.
ಕಾಂಗ್ರೆಸ್ ಪಕ್ಷದಿಂದಲೇ ಅಧ್ಯಕ್ಷರಾಗಿರುವುದಾಗಿ ಹೇಳಿಕೆ ನೀಡಿರುವ ಕಡೂರು ಪುರಸಭೆ ಅಧ್ಯಕ್ಷರಿಗೆ ಎಷ್ಟು ಜನ ಕಾಂಗ್ರೆಸ್ ಸದಸ್ಯರು ಬೆಂಬಲಿಸಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕಿದೆ. ಕಡೂರು ಪುರಸಭೆಯಲ್ಲಿ ಕಾಂಗ್ರೆಸ್‌ನ ಏಳು ಸದಸ್ಯರಿದ್ದು, ಜೆಡಿಎಸ್‌ನಿಂದ ಆಯ್ಕೆಯಾಗಿದ್ದ ಆರು ಸದಸ್ಯರಲ್ಲಿ ಐದು ಜನರು ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಕಾಂಗ್ರೆಸ್‌ಗೆ 12 ಮತಗಳು ಹಾಗೂ ಶಾಸಕರ ಮತ ಸೇರಿ ಒಟ್ಟು 13 ಮತಗಳೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿಯುವ ಎಲ್ಲ ಸಾಧ್ಯತೆ ಇತ್ತು. ಶಾಸಕರ ಗಮನಕ್ಕೆ ತಂದು ನಾಮಪತ್ರ ಸಲ್ಲಿಸಲಾಗಿತ್ತು. ಇದಕ್ಕೆ ಪಕ್ಷೇತರ ಸದಸ್ಯರ ಬೆಂಬಲವೂ ದೊರೆಯುವ ನಿರೀಕ್ಷೆಯಿತ್ತು. ಆದರೆ ಅನಿರೀಕ್ಷಿತ ಬೆಳವಣಿಗಳಿಂದ ಅಧಿಕಾರ ಕೈತಪ್ಪಿದೆ.
ಇದು ಕಾಂಗ್ರೆಸ್ ಪುರಸಭೆ ಸದಸ್ಯರಿಗೆ ತೀವ್ರ ಅಘಾತ ಉಂಟಾಗಿದೆ. ನಾನು ಕಾಂಗ್ರೆಸ್ ನಿಂದ ಅಧ್ಯಕ್ಷನಾಗಿದ್ದೇನೆ ಎಂದು ಹೇಳಿರುವ ಪುರಸಭೆ ಅಧ್ಯಕ್ಷರು ಅದನ್ನು ಹೇಗೆ ಸಮರ್ಥಿಸಿಕೊಳ್ಳುತ್ತಾರೆ? ಎಂದು ಪ್ರಶ್ನಿಸಿದರು. ಮುಂಬರುವ ಪುರಸಭೆ ಚುನಾವಣೆಯಲ್ಲಿ ಶಾಸಕ ಕೆ.ಎಸ್.ಆನಂದ್ ನೇತೃತ್ವದಲ್ಲಿ ಕಾಂಗ್ರೆಸ್ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.
ಪುರಸಭೆ ಸದಸ್ಯರಾದ ಹಾಲಮ್ಮ, ಶ್ರೀಕಾಂತ್, ಜ್ಯೋತಿ ಆನಂದ್, ಮಾಜಿ ಉಪಾಧ್ಯಕ್ಷ ಎಂ.ಸೋಮಶೇಖರ್ ಇದ್ದರು.

Share This Article

ಮಳೆಗಾಲದಲ್ಲಿ ಬೆಚ್ಚಗಿರುವುದು ಹೇಗೆ? ಚಳಿಗೆ ಥರಥರ ನಡುಗುವ ಬದಲು ಹೀಗೆ ಮಾಡಿ…Rainy Weather Tips

ಬೆಂಗಳೂರು: ಕಳೆದ ಎರಡು ದಿನದಿಂದ ಎಲ್ಲೆಡೆ ಭಾರಿ ಮಳೆ ಸುರಿಯುತ್ತಿದೆ. ನಗರದಲ್ಲಿ ಸುರಿದ ಧಾರಾಕಾರ ಮಳೆಗೆ…

ದೀರ್ಘ ಕಾಲದ ಬೆನ್ನು ನೋವು ನಿಯಂತ್ರಣಕ್ಕೆ ಮಾರ್ಜಾಲಾಸನ | Back Pain

ಪ್ರ: ಮಾರ್ಜಾಲಾಸನದ ಬಗ್ಗೆ ಮಾಹಿತಿ, ಅಭ್ಯಾಸದ ಕ್ರಮ ತಿಳಿಸಿ (Back Pain). ಉ: ಈ ಆಸನಕ್ಕೆ…

ಎಳನೀರನ್ನು ಹೀಗೆ ಕುಡಿದರೆ ಸಾಕು ಹೊಟ್ಟೆಯ ಸುತ್ತ ಸೇರಿಕೊಂಡಿರುವ ಬೊಜ್ಜು ಬೇಗನೆ ಕರಗುತ್ತೆ..!

ಪ್ರತೀ ಊರಿನಲ್ಲಿ ಎಳನೀರು ಸಿಗುತ್ತದೆ. ಇದನ್ನು ನಿಯಮಿತವಾಗಿ ಕುಡಿಯುತ್ತಾ ಬಂದರೆ ತೂಕವನ್ನು ಸಾಕಷ್ಟು ಪ್ರಮಾಣದಲ್ಲಿ ಕಡಿಮೆ…