More

    ಪದವೀಧರರ ಧ್ವನಿಯಾಗಿ ಕೆಲಸ ಮಾಡುವೆ

    ಸೊರಬ: ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಪಕ್ಷದ ಹಿರಿಯರು ಅವಕಾಶ ಕಲ್ಪಿಸಿದ್ದು, ಮತದಾರರ ಆಶೀರ್ವಾದದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹೇಳಿದರು.

    ವೈದ್ಯಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, ಸಂಘ ಸಂಸ್ಥೆಗಳಲ್ಲಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಅನುಭವ ಇದೆ. ಪದವೀಧರರ ಸಮಸ್ಯೆಯನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ರಾಜಕೀಯ ಕ್ಷೇತ್ರದಲ್ಲಿ ಪದವೀಧರರ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರು ತಮ್ಮನ್ನೇ ಅಭ್ಯರ್ಥಿ ಎಂದುಕೊಂಡು ಪ್ರಚಾರ ನಡೆಸುತ್ತಿದ್ದಾರೆ. 85 ಸಾವಿರ ಮತದಾರರಿದ್ದು, ಬಹುಮತದೊಂದಿಗೆ ಗೆಲುವು ಸಾಧಿಸುವ ವಿಶ್ವಾಸವಿದೆ. ನೈಋತ್ಯ ಪದವೀಧರ ಕ್ಷೇತ್ರದಲ್ಲಿ ನನಗೆ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಬೋಜೆಗೌಡ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿದರು.
    ಬಾಲ್ಯದಿಂದ ಸಂಘದ ಕಾರ್ಯಕರ್ತ:
    ಬಾಲ್ಯದಿಂದಲೇ ಬಸವೇಶ್ವರ ಶಾಖೆಯಿಂದ ಆರ್‌ಎಸ್‌ಎಸ್ ಕಾರ್ಯಕರ್ತನಾಗಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹೇಳಿದರು. ನಂತರ ಪ್ರಾಥಮಿಕ ಶಿಕ್ಷಾವರ್ಗ, ಸಂಘ ಶಿಕ್ಷಾವರ್ಗವನ್ನು ಪೂರ್ಣ ಮಾಡಿದ್ದೇನೆ. ವೈದ್ಯಕೀಯ ಶಿಕ್ಷಣ ಪೂರೈಸುವ ವೇಳೆ ಸಂಘದ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸಿದ್ದೇನೆ. ವಿಕಾಸ ಟ್ರಸ್ಟ್ ಜವಾಬ್ದಾರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು. ಹರ್ಷ ಹತ್ಯೆ ನಂತರ ಶಿವಮೊಗ್ಗದಲ್ಲಿ ವ್ಯಾಪಾರ ವಹಿವಾಟಿನಲ್ಲಿ ಹಿನ್ನಡೆಯಾಗಿತ್ತು. ಇದರಿಂದ ಶಾಂತಿಯಾತ್ರೆಯಲ್ಲಿ ಪಾಲ್ಗೊಂಡಿದ್ದೆ. ಆದರೆ ಕೆಲವರು ನನ್ನ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಪ್ರತಿಕ್ರಿಯಿಸಿದರು.
    ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಕರೊನಾ ಸಂದರ್ಭದಲ್ಲಿ ವೈದ್ಯ ಧನಂಜಯ ಸರ್ಜಿ ಅವರ ಸೇವೆ ಅಪಾರ. ಅಭ್ಯರ್ಥಿ ಬಗ್ಗೆ ಮತದಾರರಲ್ಲಿಯೂ ಉತ್ತಮ ಅಭಿಪ್ರಾಯವಿದೆ.
    ಎಂಎಲ್‌ಸಿ ಡಿ.ಎಸ್.ಅರುಣ್, ಸಂಘ ಪರಿವಾರದ ಹಿರಿಯ ಎಚ್.ಎಸ್.ಮಂಜಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ಟಿ.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಪುರಸಭೆ ಸದಸ್ಯ ಎಂ.ಡಿ.ಉಮೇಶ್, ಪ್ರಮುಖರಾದ ದೇವೇಂದ್ರಪ್ಪ, ಮಾಲತೇಶ್, ಜಾನಕಪ್ಪ ಒಡೆಯರ್ ಸುದ್ದಿಗೋಷ್ಠಿಯಲ್ಲಿದ್ದರು.

    ವೈದ್ಯಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, ಸಂಘ ಸಂಸ್ಥೆಗಳಲ್ಲಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಅನುಭವ ಇದೆ. ಪದವೀಧರರ ಸಮಸ್ಯೆಯನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ರಾಜಕೀಯ ಕ್ಷೇತ್ರದಲ್ಲಿ ಪದವೀಧರರ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರು ತಮ್ಮನ್ನೇ ಅಭ್ಯರ್ಥಿ ಎಂದುಕೊಂಡು ಪ್ರಚಾರ ನಡೆಸುತ್ತಿದ್ದಾರೆ. 85 ಸಾವಿರ ಮತದಾರರಿದ್ದು, ಬಹುಮತದೊಂದಿಗೆ ಗೆಲುವು ಸಾಧಿಸುವ ವಿಶ್ವಾಸವಿದೆ. ನೈಋತ್ಯ ಪದವೀಧರ ಕ್ಷೇತ್ರದಲ್ಲಿ ನನಗೆ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಬೋಜೆಗೌಡ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿದರು.
    ಬಾಲ್ಯದಿಂದ ಸಂಘದ ಕಾರ್ಯಕರ್ತ: ಬಾಲ್ಯದಿಂದಲೇ ಬಸವೇಶ್ವರ ಶಾಖೆಯಿಂದ ಆರ್‌ಎಸ್‌ಎಸ್ ಕಾರ್ಯಕರ್ತನಾಗಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹೇಳಿದರು. ನಂತರ ಪ್ರಾಥಮಿಕ ಶಿಕ್ಷಾವರ್ಗ, ಸಂಘ ಶಿಕ್ಷಾವರ್ಗವನ್ನು ಪೂರ್ಣ ಮಾಡಿದ್ದೇನೆ. ವೈದ್ಯಕೀಯ ಶಿಕ್ಷಣ ಪೂರೈಸುವ ವೇಳೆ ಸಂಘದ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸಿದ್ದೇನೆ. ವಿಕಾಸ ಟ್ರಸ್ಟ್ ಜವಾಬ್ದಾರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು. ಹರ್ಷ ಹತ್ಯೆ ನಂತರ ಶಿವಮೊಗ್ಗದಲ್ಲಿ ವ್ಯಾಪಾರ ವಹಿವಾಟಿನಲ್ಲಿ ಹಿನ್ನಡೆಯಾಗಿತ್ತು. ಇದರಿಂದ ಶಾಂತಿಯಾತ್ರೆಯಲ್ಲಿ ಪಾಲ್ಗೊಂಡಿದ್ದೆ. ಆದರೆ ಕೆಲವರು ನನ್ನ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಪ್ರತಿಕ್ರಿಯಿಸಿದರು.
    ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಕರೊನಾ ಸಂದರ್ಭದಲ್ಲಿ ವೈದ್ಯ ಧನಂಜಯ ಸರ್ಜಿ ಅವರ ಸೇವೆ ಅಪಾರ. ಅಭ್ಯರ್ಥಿ ಬಗ್ಗೆ ಮತದಾರರಲ್ಲಿಯೂ ಉತ್ತಮ ಅಭಿಪ್ರಾಯವಿದೆ.
    ಎಂಎಲ್‌ಸಿ ಡಿ.ಎಸ್.ಅರುಣ್, ಸಂಘ ಪರಿವಾರದ ಹಿರಿಯ ಎಚ್.ಎಸ್.ಮಂಜಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ಟಿ.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಪುರಸಭೆ ಸದಸ್ಯ ಎಂ.ಡಿ.ಉಮೇಶ್, ಪ್ರಮುಖರಾದ ದೇವೇಂದ್ರಪ್ಪ, ಮಾಲತೇಶ್, ಜಾನಕಪ್ಪ ಒಡೆಯರ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts