ದಾಂಧಲೆ ಎಸಗಿದವರ ವಿರುದ್ಧ ಕ್ರಮ : ರಾಜ್ಯ ಸರ್ಕಾರಿ ನೌಕರರ ಸಂಘ ಆಗ್ರಹ: ತಹಸೀಲ್ದಾರ್‌ಗೆ ಮನವಿ

New Project (1)
Published on

ಬಂಟ್ವಾಳ: ವಿಟ್ಲ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಅವರ ಕಚೇರಿಯಲ್ಲಿ ದಾಂಧಲೆ ಎಸಗಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಂಟ್ವಾಳ ಆಡಳಿತ ಸೌಧದ ಮುಂಭಾಗ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ವತಿಯಿಂದ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ.ಭಟ್ ಅವರಿಗೆ ಮನವಿ ಸಲ್ಲಿಸಿ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು, ಮತ್ತು ನಿಯೋಜಿತ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮಾತನಾಡಿ, ಘಟನೆಯಿಂದ ಸರ್ಕಾರಿ ನೌಕರರ ಮನೋಸ್ಥೈರ್ಯ ಕುಸಿದಿದೆ. ಕಚೇರಿಯಲ್ಲಿ ಕೆಲಸ ಮಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ಆರೋಪಿಯೊಬ್ಬರು ಬಂಟ್ವಾಳ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಶಿರಸ್ತೇದಾರ್ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿ ಕಂದಾಯ ಇಲಾಖೆ ನೌಕರರ ಸಂಘವೂ ಖಂಡನೆ ವ್ಯಕ್ತಪಡಿಸಿದ್ದು, ತಾಲೂಕು ಸಂಘದ ಗೌರವಾಧ್ಯಕ್ಷ ರಾಜೇಶ್ ನಾಯ್ಕ ಈ ಕುರಿತು ಪ್ರಕಟಣೆ ನೀಡಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯ ಪರಿಷತ್ ಸದಸ್ಯ ಜನಾರ್ದನ ಜೆ, ತಾಲೂಕು ಖಜಾಂಚಿ ಬಸಯ್ಯ ಆಲಿಮಟ್, ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಅನಿಲ್ ಕೆ.ಪೂಜಾರಿ, ಉಪತಹಸೀಲ್ದಾರ್‌ಗಳಾದ ನವೀನ್ ಬೆಂಜನಪದವು, ನರೇಂದ್ರನಾಥ ಮಿತ್ತೂರು, ದಿವಾಕರ ಮುಗುಳ್ಯ, ಕಂದಾಯ ನಿರೀಕ್ಷಕರಾದ ವಿಜಯ್, ಪ್ರಶಾಂತ್ ಶೆಟ್ಟಿ, ಸರ್ಕಾರಿ ನೌಕರರ ಸಂಘದ ನಾನಾ ಇಲಾಖೆಯ ನಿರ್ದೇಶಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net