More

    ದಾಖಲೆ ಕೊಟ್ರೆ ಡೊನೇಷನ್ ಪಡೆವವರ ವಿರುದ್ಧ ಕ್ರಮ

    ಶಿವಮೊಗ್ಗ: ಖಾಸಗಿ ಶಾಲೆಗಳಲ್ಲಿ ಡೊನೇಷನ್ ತೆಗೆದುಕೊಳ್ಳುವಂತಿಲ್ಲ. ಒಂದು ವೇಳೆ ತೆಗೆದುಕೊಂಡಿದ್ದು ಗಮನಕ್ಕೆ ಬಂದರೆ ಅಥವಾ ದಾಖಲೆ ಕೊಟ್ಟರೆ ಕ್ರಮಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

    ಖಾಸಗಿ ಶಾಲೆಗಳ ಶುಲ್ಕ ನಿಯಂತ್ರಣ ಮಾಡುವುದು ನಮ್ಮ ಕೈಯಲ್ಲಿಲ್ಲ. ಅದಕ್ಕೆ ಕ್ಯಾಂಪ್ಸ್(ರಾಜ್ಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ) ಇರುತ್ತದೆ. ಅಲ್ಲಿ ತೆಗೆದುಕೊಂಡ ತೀರ್ಮಾನದಂತೆ ಶುಲ್ಕ ಪಡೆಯಲು ಅವಕಾಶವಿದೆ. ಅದರಲ್ಲಿ ಶಿಕ್ಷಣ ಇಲಾಖೆ ಮೂಗು ತೂರಿಸಲು ಸಾಧ್ಯವಿಲ್ಲ. ಆದರೆ ಶುಲ್ಕ ಸಂಗ್ರಹ ನೆಪದಲ್ಲಿ ಡೊನೇಷನ್ ಪಡೆಯುವುದು ತಪ್ಪು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಖಾಸಗಿ ಶಾಲೆಗಳಲ್ಲಿ ಡೊನೇಷನ್ ಪಡೆಯುತ್ತಿದ್ದಾರೆ ಎಂಬುದು ನನ್ನ ಗಮನಕ್ಕೂ ಬಂದಿದೆ. ಆದರೆ ದಾಖಲೆ ಇಲ್ಲದೇ ಏನನ್ನೂ ಮಾಡಲು ಸಾಧ್ಯವಿಲ್ಲ. ಡೊನೇಷನ್ ಕೇಳುವುದು ತಪ್ಪು, ಕೊಡುವುದೂ ತಪ್ಪು. ಡೊನೇಷನ್ ಪಡೆದಿರುವ ದಾಖಲೆಗಳನ್ನು ಇಲಾಖೆಗೆ ಸಲ್ಲಿಸಿದರೆ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇನೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts