More

    ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಮ

    ಬೆಂಗಳೂರು: ವೈದ್ಯಕೀಯ ಸೀಟು ಬ್ಲಾಕಿಂಗ್ ದಂಧೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ದಂಧೆ ನಡೆಯದಂತೆ ಕಡಿವಾಣ ಹಾಕಲು ಎಲ್ಲಾ ರೀತಿಯ ಕ್ರಮವನ್ನೂ ಕೈಗೊಳ್ಳಲಾಗುವುದು ಎಂದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

    ವೈದ್ಯಕೀಯ ಸೀಟು ಬ್ಲಾಕಿಂಗ್​ನಂತಹ ಕೃತ್ಯಗಳನ್ನು ಸಹಿಸುವುದಿಲ್ಲ. ಮುಂದಿನ ದಿನಗಳಲ್ಲಿ ಇದಕ್ಕೆ ಸಂಪೂರ್ಣ ಕಡಿವಾಣ ಹಾಕುತ್ತೇನೆ. ಯಾವುದೇ ಕಾರಣಕ್ಕೂ ಇಂತಹ ಕೃತ್ಯಗಳು ಮುಂದು ವರಿಯಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ (ಆರ್​ಜಿಯುಎಚ್​ಎಸ್) ಸೀಟ್ ಬ್ಲಾಕಿಂಗ್ ಕುರಿತು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಇದೊಂದು 1,100 ಕೋಟಿ ರೂ. ಹಗರಣ ಎಂದು ಹೇಳಿದೆ. ರಾಜ್ಯ ಸರ್ಕಾರ ಮತ್ತು ತೆರಿಗೆ ಇಲಾಖೆ ಏನು ಮಾಡುತ್ತಿದೆ ಎಂದು ನಿವೃತ್ತ ಡಿಜಿಪಿ ಶಂಕರ್ ಬಿದರಿ ಫೇಸ್​ಬುಕ್ ಖಾತೆಯಲ್ಲಿ ಪ್ರಶ್ನಿಸಿರುವ ಬಗ್ಗೆ ಅವರು ಪ್ರತಿಕ್ರಿಯಿಸಿ ಈ ಹೇಳಿಕೆ ನೀಡಿದ್ದಾರೆ. ಸರಣಿ ಪೋಸ್ಟ್​ಗಳನ್ನು ಮಾಡಿರುವ ಬಿದರಿ, 2014 ಸ್ನಾತಕೋತ್ತರ ಪದವಿ ಮತ್ತು ಎಂಬಿಬಿಎಸ್ ಕೋರ್ಸ್​ಗಳಲ್ಲಿ ಅಕ್ರಮ ನಡೆದಿದ್ದು, ಈ ಸಂಬಂಧ ರಚನೆಯಾಗಿರುವ ಸಿಐಡಿ ತನಿಖೆ ಯಾವ ಹಂತದಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

    ವೈದ್ಯಕೀಯ ಸೀಟು ಬ್ಲಾಕಿಂಗ್ ದಂಧೆ ನಡೆಯುತ್ತಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಶಂಕರ್ ಬಿದರಿ ಸಾಮಾಜಿಕ ಜಾಲತಾಣದಲ್ಲಿ ಆರೋಪ ಮಾಡಿದ್ದಾರೆ. ಬಿದರಿ ನನಗೂ ಆತ್ಮೀಯರು. ಅವರು ನೇರವಾಗಿಯೇ ಅದನ್ನು ನನ್ನ ಗಮನಕ್ಕೆ ತರಬಹುದಿತ್ತು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts