More

    ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ

    ಕೆ.ಎಂ.ದೊಡ್ಡಿ: ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

    ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್‌ಎಸ್‌ಎಲ್ ವರದಿ ಆಧರಿಸಿ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದ ಅವರು, ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಪೂರ್ಣಗೊಂಡ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

    ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರು, ಸಿಬ್ಬಂದಿ ಕೊರತೆಯಿದೆ. ಹೀಗಾಗಿಯೇ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಲ್ಲಿ ವೈದ್ಯರ ಸೇವೆಯನ್ನು ಕಡ್ಡಾಯ ಮಾಡಿದೆ ಎಂದು ಅವರು, ತಾಲೂಕು ಮತ್ತು ಸ

    ಮುದಾಯ ಆಸ್ಪತ್ರೆಗಳಿಗೆ ನುರಿತ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಈಗಾಗಲೇ ಆದೇಶಿಸಲಾಗಿದೆ ಎಂದು ತಿಳಿಸಿದರು.
    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 20ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆ ಇದೆ. ಕೇಂದ್ರ ಸರ್ಕಾರರ ದುರಾಡಳಿತ ಹಾಗೂ ಮಲತಾಯಿ ಧೋರಣೆಯಿಂದ ರಾಜ್ಯದ ಜನತೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲಿದ್ದಾರೆ ಎಂದರು.

    ಶಾಸಕ ಕದಲೂರು ಉದಯ್, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಪಕ್ಷದ ಮುಖಂಡ ಸ್ಟಾರ್ ಚಂದ್ರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts