More

    ವಾಲ್ಮೀಕಿ ಭವನ ನಿರ್ಮಾಣಕ್ಕೆ ಕ್ರಮ

    ಗೋಣಿಕೊಪ್ಪ: ಪೊನ್ನಂಪೇಟೆ ತಾಲೂಕಿನಲ್ಲಿ ವಾಲ್ಮೀಕಿ ಭವನ ಹಾಗೂ ಆದಿವಾಸಿಗಳ ಭವನ ನಿರ್ಮಿಸಲಾಗುವುದು ಎಂದು ಶಾಸಕ ಎ.ಎಸ್.ಪೊನ್ನಣ್ಣ ಭರವಸೆ ನೀಡಿದರು.

    ಪೊನ್ನಂಪೇಟೆಯ ತಾಲೂಕು ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಭವನ ನಿರ್ಮಾಣಕ್ಕೆ 3 ಕೋಟಿ ರೂ. ಮೀಸಲಿಸಿರಿದ್ದು, ತಾಲೂಕು ಆಡಳಿತ ಸ್ಥಳ ಗುರುತಿಸಿದ ತಕ್ಷಣವೇ ಕಾಮಗಾರಿ ಆರಂಭಿಸಲಾಗುವುದು ಎಂದರು.
    ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಾಲ್ಮೀಕಿ ಜಯಂತಿ ದಿನದಂದು ಸರ್ಕಾರಿ ರಜೆ ಘೋಷಿಸಿತು. ದಲಿತರು ಹಾಗೂ ಆದಿವಾಸಿಗಳ ಬಗ್ಗೆ ಒಲವು ಹೊಂದಿರುವ ನಮ್ಮ ಸರ್ಕಾರ, ವಾಲ್ಮೀಕಿ ಜಯಂತಿ ಆಚರಣೆಗೆ ಹೆಚ್ಚು ಒತ್ತು ನೀಡುತ್ತಿದೆ ಎಂದರು.

    ಪೊನ್ನಂಪೇಟೆ ತಹಸೀಲ್ದಾರ್ ಎನ್.ಎಸ್.ಪ್ರಶಾಂತ್, ತಾಪಂ ಇಒ ಅಪ್ಪಣ್ಣ, ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುರೇಶ್, ಪೊನ್ನಂಪೇಟೆ ಠಾಣಾಧಿಕಾರಿ ನವೀನ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts