16 C
Bangalore
Saturday, December 7, 2019

ಸುಳ್ಳು ಅರ್ಜಿಗೆ ಕ್ರಮ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

< ರೈತ ಜನಸಂಪರ್ಕ ಸಭೆಯಲ್ಲಿ ಅಧಿಕಾರಿಗಳಿಗೆ ಡಾ.ಜಯಮಾಲ ಸೂಚನೆ>

ಉಡುಪಿ: ಅಡಕೆ ತೋಟವೇ ಇಲ್ಲದವರು ಆರ್‌ಟಿಸಿ ನೀಡಿ ಕೊಳೆರೋಗ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದರೆ, ಕ್ರಮ ಕೈಗೊಳ್ಳಿ. ನೀಡಿದ ಸಹಾಯಧನ ವಾಪಸ್ ಪಡೆಯಿರಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಭಾನುವಾರ ರೈತ ಜನಸಂಪರ್ಕ ಸಭೆಯಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡಿದರು.

ವಿಷಯ ಪ್ರಸ್ತಾಪಿಸಿದ ರೈತ ಸಂಜೀವ ಶೆಟ್ಟಿ, ತೋಟ ಇಲ್ಲದವರಿಗೂ ಕೊಳೆರೋಗ ಪರಿಹಾರ ಹಣ ನೀಡಿದ್ದಾರೆ. ನನ್ನ ತೋಟದಲ್ಲಿ 265 ಅಡಕೆ ಮರಗಳು ನಾಶವಾಗಿದ್ದರೂ, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿಲ್ಲ ಎಂದು ದೂರಿದರು. ಜಿಲ್ಲಾ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ, 2600 ಅರ್ಜಿ ಆನ್‌ಲೈನ್‌ನಲ್ಲಿ ದಾಖಲಿಸಲು ಬಾಕಿ ಇದ್ದು, ತಾಂತ್ರಿಕ ಕಾರಣಗಳಿಂದ ದಾಖಲಾತಿ ವಿಳಂಬವಾಗಿದೆ. ಅರ್ಜಿಗಳನ್ನು ಡಿ.31ರೊಳಗೆ ವಿಲೇವಾರಿ ಮಾಡುವಂತೆ ಸಚಿವರು ಸೂಚನೆ ನೀಡಿದರು.

10 ಲಕ್ಷ ರೂ.ವರೆಗೆ ಸಾಲ : ರೈತರಿಗೆ ಸಾಲ ನೀಡಿ ಮನ್ನಾ ಮಾಡುವ ಬದಲು ಮನೆ ನಿರ್ಮಾಣ, ತೋಟ ಅಭಿವೃದ್ಧಿ, ಬೇಲಿ ನಿರ್ಮಾಣ ಮುಂತಾದ ಕಾರ್ಯಕ್ಕೆ 10ಲಕ್ಷ ರೂ.ವರೆಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಎಂದು ರೈತರು ಸಚಿವರನ್ನು ಕೋರಿದರು. ಇದಕ್ಕೆ ಉತ್ತರಿಸಿದ ಸಚಿವೆ, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಜಾರಿಗೆ ಪ್ರಯತ್ನಿಸಲಾಗುವುದು. ಎಲ್ಲ ರೈತರು ತಮ್ಮ ಬೆಳೆಗಳಿಗೆ ಬೆಲೆ ವಿಮೆ ಮಾಡಿಸಬೇಕು. ರೈತರಿಗೆ ಈ ಕುರಿತು ಪ್ರತಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಗಳು ಮಾಹಿತಿ ನೀಡಬೇಕು ಎಂದರು.

ಜಲಾನಯನ ಅಕ್ರಮ ತನಿಖೆಗೆ ಸಮಿತಿ: ಹಾಲಾಡಿ ಗ್ರಾಪಂ ಜಲಾನಯನ ಯೋಜನೆ ಖಾತೆಯಲ್ಲಿ 7 ಲಕ್ಷ ರೂ.ಇದೆ. ಆದರೆ, ಕೃಷಿ ಅಧಿಕಾರಿಗಳು ಕೇಂದ್ರ ಸರ್ಕಾರ ಆಗಸ್ಟ್‌ನಲ್ಲೇ ಯೋಜನೆ ಹಿಂಪಡೆದಿದೆ ಎಂದು ಗಿಡಗಳನ್ನು ನೆಟ್ಟಿರುವ ರೈತರಿಗೆ ಹಣ ಪಾವತಿಸಲು ಹಿಂದೇಟು ಹಾಕುತ್ತಿದ್ದಾರೆ. ಆಗಸ್ಟ್‌ನಲ್ಲೇ ಯೋಜನೆ ರದ್ದಾಗಿದ್ದರೆ ಅಕ್ಟೋಬರ್‌ನಲ್ಲಿ ಸಭೆ ನಡೆಸಿದ್ದು ಯಾಕೆ ಎಂದು ರೈತರು ಪ್ರಶ್ನಿಸಿದರು. ವಂಡ್ಸೆ ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಪಂನ ಜಲಾನಯನ ಸಮಿತಿಗೆ ತಿಳಿಸದೆ ವೆಂಟೆಂಡ್ ಡ್ಯಾಂ ನಿರ್ಮಿಸಿದ್ದಾರೆ. ಸತ್ತ ಗಿಡಗಳನ್ನು ತಂದು ನೆಟ್ಟಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ಈ ಕುರಿತು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ವರದಿ ಪಡೆಯಲಾಗುವುದು ಎಂದು ಸಚಿವೆ ಜಯಮಾಲ ಹೇಳಿದರು.

ಸಕ್ಕರೆ ಕಾರ್ಖಾನೆ ಆರಂಭಿಸಿ, ಕಬ್ಬು ಬೆಳಿತೀವಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಕಬ್ಬು ಬೆಳೆಯಲು ತಾವು ಸಿದ್ದ ಎಂದು ರೈತರು ತಿಳಿಸಿದರು. 2800 ರೈತರು ಕಬ್ಬು ಬೆಳೆಯಲು ಸಿದ್ಧರಿರುವುದಾಗಿ ಒಪ್ಪಿಗೆ ಪತ್ರ ನೀಡಿರುವುದಾಗಿ ರೈತ ಸಂಘದ ನಾಯಕರು ತಿಳಿಸಿದರು. ಆದರೆ ವಾರಾಹಿ ಯೋಜನೆ ಪೂರ್ಣಗೊಂಡಿಲ್ಲ. ಈ ಯೋಜನೆ ಮುಗಿದು ಸಂಪೂರ್ಣ ನೀರಾವರಿ ದೊರೆತಲ್ಲಿ ಸಕ್ಕರೆ ಕಾರ್ಖಾನೆಗೆ ಕಬ್ಬಿನ ಕೊರತೆ ಆಗುವುದಿಲ್ಲ. ಕಾರ್ಖಾನೆ ಪುನಃಶ್ಚೇತನ ಬದಲು ಹೊಸ ಕಾರ್ಖಾನೆ ಮಾಡಬೇಕು ಎಂದು ರೈತರು ಕೋರಿದರು. ವಾರಾಹಿ ಯೋಜನೆಯ ಪ್ರಗತಿ ಬಗ್ಗೆ ಉತ್ತರಿಸಿದ ಅಧಿಕಾರಿಗಳು, ಎಡದಂಡೆ ಕಾಲುವೆ ಕಾಮಗಾರಿ ಪೂರ್ಣಗೊಂಡಿದ್ದು, ಬಲದಂಡೆ ಕಾಮಗಾರಿಯ ಯೋಜನೆಗೆ ಅಂತಿಮ ಅನುಮೋದನೆ ದೊರೆಯುವುದು ಬಾಕಿ ಇದ್ದು, 2019 ರಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದರು. ವಾರಾಹಿ ಯೋಜನೆಯ ಬಿಲ್ಲಾಡಿ ಬಳಿ ಕಾಲುವೆ ನಡುವೆ ಬಂಡೆ ಬಂದಿದ್ದು, ಇದನ್ನು ಒಡೆಯದೆ ಕಾಮಗಾರಿ ಮುಂದುರೆಸಿರುವ ಕಾರಣ ಕಾಲುವೆ ವ್ಯಾಪ್ತಿಯ 3 ಗ್ರಾಮಗಳಿಗೆ ನೀರು ದೊರೆಯುತ್ತಿಲ್ಲ. ಈ ಕುರಿತು ಅಧಿಕಾರಿಗಳ ನಿರ್ಲಕ್ಷೃ ವಿರುದ್ಧ ರೈತರು ಅಸಮಧಾನ ವ್ಯಕ್ತಪಡಿಸಿದರು. ಶೀಘ್ರದಲ್ಲಿ ಬಂಡೆ ಒಡೆದು ನೀರು ಒದಗಿಸಲು ಸಚಿವರು ಸೂಚಿಸಿದರು. ವಾರಾಹಿ ಯೋಜನೆ ಕುರಿತಂತೆ ಪ್ರತ್ಯೇಕ ಸಭೆ ನಡೆಸುವಂತೆ ರೈತರು ಕೋರಿದರು.

ಯೋಜನೆ ತಲುಪಿಸುವಲ್ಲಿ ಲೋಪ: ಪ್ರಕೃತಿಯನ್ನು ರಕ್ಷಿಸಿ ಪೋಷಿಸುತ್ತಿರುವ, ನಾಡಿಗೆ ಅನ್ನ ನೀಡುತ್ತಿರುವ ರೈತರಿಗೆ ಸರ್ಕಾರದ ಯೋಜನೆ ತಲುಪಿಸುವಲ್ಲಿ ಲೋಪದೋಷಗಳಿವೆ. ಪಕ್ಷಾತೀತವಾಗಿ ರೈತರ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದರು. ರಾಷ್ಟ್ರೀಯ ರೈತ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು.


Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...