More

    ಗುಣಮಟ್ಟದ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ

    ಅರಸೀಕೆರೆ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

    ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ, ಸಕ್ರಮ ಎನ್ನುವ ಪದ ತೆಗೆದು ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಲಾಗುವುದು. ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಈಗಾಗಲೇ ಕೊಳವೆ ಬಾವಿ ಕೊರೆಯಿಸಿಕೊಂಡಿರುವ ರೈತರಿಗೆ ವಿದ್ಯುತ್ ಸಂಪರ್ಕ ನೀಡಲಾಗುವುದು. ತಾಲೂಕಿನಲ್ಲಿ 1661 ಕೊಳವೆ ಬಾವಿಗಳಿಗೆ ಹೊಸ ಸಂಪರ್ಕ ನೀಡಬೇಕಿದೆ. ಹಗಲು ವೇಳೆಯಲ್ಲಿ ಸತತ ಏಳು ತಾಸು ಮೂರು ಫೇಸ್ ವಿದ್ಯುತ್ ನೀಡಲು ಚಿಂತಿಸಿದ್ದು, ಸೌರ ವಿದ್ಯುತ್ ಉತ್ಪಾದನೆ ಕಡೆ ಗಮನಹರಿಸಲಾಗುತ್ತಿದೆ. ರೈತಪರವಾದ ಆಡಳಿತ ನೀಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ಇನ್ನು ಮುಂದೆ ಕೊರೆಯಿಸುವ ಎಲ್ಲ ಕೊಳವೆ ಬಾವಿಗಳು ಸಕ್ರಮವೇ ಆಗಲಿದ್ದು, ಇಂಧನ ಇಲಾಖೆಯ ಮಾರ್ಗಸೂಚಿಗಳನ್ನು ಎಲ್ಲರೂ ತಪ್ಪದೆ ಪಾಲಿಸಬೇಕು ಎಂದು ಸಲಹೆ ನೀಡಿದರು.

    ರಾಜ್ಯದಲ್ಲಿ 400 ವಿದ್ಯುತ್ ವಿತರಣಾ ಉಪಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರಸಕ್ತ ವರ್ಷದಲ್ಲಿ ಮೂರು ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ. ಸದ್ಯ 1300 ಮೆ.ವಾಟ್ ಲಭಿಸುತ್ತಿದ್ದು, ರೈತರಿಗೆ ಒದಗಿಸಲಾಗುತ್ತದೆ. ಮುಂಬರುವ ದಿನಗಳಲ್ಲಿ ಹೆಚ್ಚಿನ ಸೌರ ವಿದ್ಯುಚ್ಛಕ್ತಿ ವಿತರಣಾ ಕೇಂದ್ರಗಳನ್ನು ಆರಂಭಿಸಿ ಕೊರತೆ ನೀಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.

    ವಿದ್ಯುತ್ ಪರಿವರ್ತಕಗಳ ಅಳವಡಿಕೆ ವಿಳಂಬ, ಹೊಸ ಸಂಪರ್ಕ ಕಲ್ಪಿಸುವಂತೆ ಕೋರಿ ರೈತರು ಸಚಿವ ಕೆ.ಜೆ.ಜಾರ್ಜ್ ಅವರಿಗೆ ಮನವಿ ಸಲ್ಲಿಸಿದರು. ಶಾಸಕೆ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಹಲವರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts