More

    ವಸತಿ ನಿಲಯಗಳಲ್ಲಿ ಅವ್ಯವಸ್ಥೆ ಕಂಡು ಬಂದರೆ ಕ್ರಮ; ಡಿಸಿ ಟಿ.ಭೂಬಾಲನ್ ಎಚ್ಚರಿಕೆ

    ವಿಜಯಪುರ: ವಸತಿ ನಿಲಯಗಳಲ್ಲಿ ಅಗತ್ಯ ಸೌಲಭ್ಯ ಒದಗಿಸುವುದು ಮೇಲ್ವಿಚಾರಕರ ಜವಾಬ್ದಾರಿಯಾಗಿದೆ. ಸರ್ಕಾರದ ಯೋಜನೆಗಳನ್ನು ಚಾಚೂ ತಪ್ಪದೇ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪ ಕಂಡು ಬಂದಲ್ಲಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಎಚ್ಚರಿಸಿದರು.

    ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಶುಚಿ, ರುಚಿಯಾದ ಮತ್ತು ಪೌಷ್ಠಿಕ ಆಹಾರ ಒದಗಿಸುವ ಮತ್ತು ವಸತಿ ನಿಲಯಗಳ ಸಮರ್ಪಕ ನಿರ್ವಹಣೆ ಕುರಿತು ವಸತಿ ನಿಲಯ ಮೇಲ್ವಿಚಾರಕರಿಗೆ, ಅಡುಗೆ ಸಹಾಯಕರಿಗೆ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

    ಸರ್ಕಾರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸಾಕಷ್ಟು ಸೌಲಭ್ಯಗಳನ್ನು ಒದಗಿಸುತ್ತಿದೆ. ಇವುಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಜವಾಬ್ದಾರಿ ವಸತಿ ನಿಲಯದ ಮೇಲ್ವಿಚಾರಕರದ್ದಾಗಿದೆ. ಶುಚಿತ್ವಕ್ಕೆ ಮೊದಲು ಆದ್ಯತೆ ನೀಡಬೇಕು. ಪೌಷ್ಠಿಕಯುಕ್ತ ಗುಣಮಟ್ಟದ ಆಹಾರವನ್ನು ವಿದ್ಯಾರ್ಥಿಗಳಿಗೆ ಒದಗಿಸಬೇಕು. ವಸತಿ ನಿಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಕಾಪಾಡಿಕೊಳ್ಳಲು, ಪರೀಕ್ಷಾ ಫಲಿತಾಂಶ ಹೆಚ್ಚಿಸಲು ಬೋಧನೆಗೆ ಒತ್ತು ನೀಡಬೇಕು. ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಬೇಕು ಎಂದು ಸೂಚಿಸಿದರು.

    ಜಿಲ್ಲಾದ್ಯಂತ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ವಿಜಯಪುರ ಹಾಗೂ ಇಂಡಿ ಉಪ ವಿಭಾಗದಲ್ಲಿ ರಥ ಯಾತ್ರೆ ನಡೆಯುತ್ತಿದೆ. ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯಕ್ರಮ ರೂಪಿಸಬೇಕು ಎಂದರು.

    ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ವಸತಿ ನಿಲಯಗಳಲ್ಲಿ ಸ್ವಚ್ಛತೆ ಜೊತೆಗೆ ಶುಚಿತ್ವ ಕಾಪಾಡಿಕೊಳ್ಳಬೇಕು. ವಸತಿ ನಿಲಯದ ಮೇಲ್ವಿಚಾರಕರು ವಿದ್ಯಾರ್ಥಿಯ ವೈಯಕ್ತಿಕ ಏಳ್ಗೆಗೆ ಸಹಕಾರಿಯಾಗಲು ಸ್ನೇಹಮಯ ವಾತಾವರಣ ಕಾಪಾಡಿಕೊಂಡು ಪರಿಣಾಮಕಾರಿ ಕಲಿಕೆಗೆ ಪ್ರೇರೇಪಿಸಬೇಕು. ವಸತಿ ನಿಲಯದ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೋಳ್ಳಬೇಕು. ಶುದ್ಧ ಕುಡಿಯುವ ನೀರು, ಅಗತ್ಯ ಮೂಲ ಸೌಲಭ್ಯ ದಿನನಿತ್ಯ ಖಚಿತಪಡಿಸಿಕೊಂಡು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

    ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts