More

    ವಿಡಿಯೊಗಳನ್ನು ಹಂಚಿಕೊಂಡರೆ ಕ್ರಮ

    ಬೆಂಗಳೂರು: ಹಾಸನದ ಹಿಂಸೆ ಮತ್ತು ಶೋಷಣೆ ಪ್ರಕರಣ ಸಂಬಂಧ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ. ಯಾರಾದರೂ ವಿಡಿಯೊಗಳನ್ನು ಹಂಚಿಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
    ಈ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ಹೆಲ್ಪ್ಲೈನ್ ೬೩೬೦೯೩೮೯೪೭ ಈ ಸಂಖ್ಯೆಗೆ ಬೆಳಗ್ಗೆ ೮ರಿಂದ ರಾತ್ರಿ ೮ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ. ಈ ಸಂಖ್ಯೆಗೆ ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
    ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡದಂತೆ ಸೂಚಿಸಲಾಗಿದೆ. ಈ ವಿಚಾರದಲ್ಲಿ ಅಗತ್ಯ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
    ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ನಾಚಿಕೆ ಪಡುವ, ಹಿಂಜರಿಯುವ, ಅವಮಾನ ಎಂದು ಭಾವಿಸುವುದು ಅಪರಾಧವೆಸಗಿದ ವ್ಯಕ್ತಿಯೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು. ಸೂಕ್ತ ಸಂವೇದನೆಯಿಂದ ವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್‌ಐಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಆಪ್ತಸಮಾಲೋಚಕರು, ವೈದ್ಯರುಗಳು, ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್‌ಐಟಿ ಪಡೆದುಕೊಂಡಿದೆ. ಸಾರ್ವಜನಿಕರೂ ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts