20.4 C
Bengaluru
Monday, January 20, 2020

ಕಾಶ್ಮೀರ ಕಣಿವೆಯಲ್ಲಿ ನಿರ್ಬಂಧಗಳ ಸಡಿಲಿಕೆ: ಕಾನೂನು, ಸುವ್ಯವಸ್ಥೆ ಕಾಪಾಡಲು ನಾಲ್ಕು ರೀತಿಯ ಕಾರ್ಯತಂತ್ರ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿ, ಅದನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಎಂದು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಿದ ನಂತರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಹಲವು ನಿರ್ಬಂಧಗಳನ್ನು ವಿಧಿಸಿತ್ತು. ಇದೀಗ ಆ ನಿರ್ಬಂಧಗಳನ್ನು ಸಡಿಲಿಸಲಾಗುತ್ತಿದೆ. 2 ಜಿ ಇಂಟರ್​ನೆಟ್​ ಸಂಪರ್ಕ ನೀಡಲಾಗುತ್ತಿದ್ದು ಸಹಸ್ರಾರು ಸ್ಥಿರದೂರವಾಣಿಗಳು ಕಾರ್ಯಾರಂಭ ಮಾಡಿವೆ.

ನಿರ್ಬಂಧಗಳು ಸಡಿಲಾಗುತ್ತಿರುವಂತೆ ಕಲ್ಲು ತೂರಾಟಗಾರರು, ಉಗ್ರರು ಹಾಗೂ ಪ್ರತ್ಯೇಕತಾವಾದಿಗಳು ಪ್ರತಿಭಟನೆ, ಹಿಂಸಾಚಾರದಲ್ಲಿ ತೊಡಗಬಹುದು ಎಂಬ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಅದೆಲ್ಲವನ್ನು ಮಟ್ಟಹಾಕಿ, ಕಾಶ್ಮೀರ ಕಣಿವೆಯಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ನಾಲ್ಕು ಕಾರ್ಯತಂತ್ರಗಳೊಂದಿಗೆ ಕಾರ್ಯಾಚರಣೆ ಆರಂಭಿಸಿದೆ.

ಮೂವರ್ಸ್​ ಆ್ಯಂಡ್​ ಶೇಕರ್ಸ್​ಗೆ ಕಡಿವಾಣ
ಹುರಿಯತ್​ ಕಾನ್ಫರೆನ್ಸ್​ ಸೇರಿ ಪ್ರತ್ಯೇಕತಾವಾದಿ ಸಂಘಟನೆಗಳನ್ನು ಸರ್ಕಾರ ಮೂವರ್ಸ್​ ಆ್ಯಂಡ್​ ಶೇಕರ್ಸ್​ ಎಂದು ಸರ್ಕಾರ ಗುರುತಿಸಿದೆ. ಕಣಿವೆಯಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರದಲ್ಲಿ ಕರ್ಫ್ಯೂ ಜಾರಿಗೊಳಿಸಿ, ಮೂವರ್ಸ್​ ಆ್ಯಂಡ್​ ಶೇಕರ್ಸ್​​ ವರ್ಗದಲ್ಲಿ ಬರುವವರನ್ನು ಗೃಹಬಂಧನದಲ್ಲಿರಿಸಲಾಗಿದೆ.

ಕಾರ್ಯಾಚರಣೆಗೆ ಮುಕ್ತ ಅವಕಾಶ
ಕಾಶ್ಮೀರ ಕಣಿವೆಯಲ್ಲಿನ ಬೆಳವಣಿಗೆಯಿಂದ ಕುಪಿತರಾಗಿರುವ ಉಗ್ರರು ಯಾವುದೇ ಕ್ಷಣದಲ್ಲಿ ದಾಳಿಗಳನ್ನು ಸಂಘಟಿಸುವ ಸಾಧ್ಯತೆ ಇದೆ. ಆದ್ದರಿಂದ, ಅವರನ್ನು ಮಟ್ಟ ಹಾಕಲು ಭಾರತೀಯ ಸೇನಾಪಡೆಗೆ ಮುಕ್ತ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಅಲ್ಲದೆ, ಪಂಜಾಬ್​ ಮತ್ತು ಜಮ್ಮುನಲ್ಲಿ ಪಾಕ್​ಗೆ ಹೊಂದಿಕೊಂಡಿರುವ ಗಡಿ ಭಾಗದಲ್ಲಿ ಗಡಿ ಭದ್ರತಾ ವ್ಯವಸ್ಥೆಯನ್ನು ಮರುಪರಿಶೀಲಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ.

ಕಮ್ಯೂನಿಟಿ ಬಾಂಡ್​ಗಳ ಮೂಲಕ ಕಲ್ಲು ಎಸೆಯುವವರ ನಿಯಂತ್ರಣ
ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟಗಾರರ ಹಾವಳಿ ಮಿತಿ ಮೀರಿದೆ. ಸಣ್ಣಪುಟ್ಟ ಕಾರಣಗಳಿಗೂ ಭದ್ರತಾ ಸಿಬ್ಬಂದಿ ಮೇಲೆ ಜನರು ಕಲ್ಲು ತೂರಿ ಹಿಮ್ಮೆಟ್ಟಿಸಲು ಪ್ರಯತ್ನಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸಮುದಾಯ ಬಾಂಡ್​ಗಳ (ಕಮ್ಯೂನಿಟಿ ಬಾಂಡ್​) ಮೂಲಕ ಇಂಥ ಯುವಕರನ್ನು ನಿಯಂತ್ರಿಸಲು ಸರ್ಕಾರ ಮುಂದಾಗಿದೆ. ಅಂದರೆ, ತಮ್ಮ ಮನೆಯಲ್ಲಿರುವ ಅಥವಾ ಸಂಬಂಧಿಕ ಯುವಕರು ಕಲ್ಲು ತೂರಾಟ ಪ್ರಕರಣಗಳಲ್ಲಿ ಭಾಗಿಯಾಗಲು ಬಿಡುವುದಿಲ್ಲ ಎಂದು ಹೇಳಿ ಕುಟುಂಬದ 20 ಸದಸ್ಯರು ಬಾಂಡ್​ಗೆ ಸಹಿಹಾಕಿ ಕೊಡಬೇಕಾಗುತ್ತದೆ. ಒಂದು ವೇಳೆ ಬಾಂಡ್​ ಉಲ್ಲಂಘಿಸಿದರೆ, ಅಂಥ ಯುವಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

ಧಾರ್ಮಿಕ ಮುಖಂಡರಿಗೆ ಬಂಧನ ಭೀತಿ
ಕಾಶ್ಮೀರ ಕಣಿವೆಯಲ್ಲಿ ಕಾನೂನು, ಸುವ್ಯವಸ್ಥೆಗೆ ಭಂಗ ಉಂಟು ಮಾಡಬಹುದು ಎಂಬ ಕಾರಣಕ್ಕಾಗಿ ಧಾರ್ಮಿಕ ಮುಖಂಡರನ್ನೂ ನಿಯಂತ್ರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಇವರು ಏನಾದರೂ ಹಿಂಸಾತ್ಮಕ ಪ್ರತಿಭಟನೆಗೆ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದಾದರೆ ತಕ್ಷಣವೇ ಅವರನ್ನು ಬಂಧಿಸಲು ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಈ ಎಲ್ಲ ಕ್ರಮಗಳಿಂದಾಗಿ ಕಾಶ್ಮೀರ ಕಣಿವೆಯಲ್ಲಿ ಸದ್ಯ ಪರಿಸ್ಥಿತಿ ಶಾಂತವಾಗಿದೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...