More

    ಕುಶಾಲನಗರದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಕ್ರಮ

    ಕುಶಾಲನಗರ: ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸದ್ಯದಲ್ಲೇ ಅನುಮೋದನೆ ತರುವುದಾಗಿ ಶಾಸಕ ಡಾ.ಮಂತರ್ ಗೌಡ ತಿಳಿಸಿದರು.

    ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ನಂತರ ಬಸ್‌ಸ್ಟಾಂಡ್‌ಗೆ ಭೇಟಿ ನೀಡಿ ಸುದ್ದಿಗಾರರ ಜತೆ ಮಾತನಾಡಿದರು.

    ಕುಶಾಲನಗರ ತಾಲೂಕಿನಲ್ಲಿ ಶಾಸಕರ ಕಚೇರಿ ತೆರೆಯಬೇಕೆನ್ನುವ ಅಭಿಲಾಷೆ ಇದೆ. ಮುಳ್ಳುಸೋಗೆಯ ತಾಲೂಕು ಪಂಚಾಯಿತಿ ಕಟ್ಟಡದಲ್ಲಿ ಶಾಸಕರ ಕಚೇರಿ ತೆರೆದು ಸಾರ್ವಜನಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ಚಿಂತನೆ ನಡೆಯುತ್ತಿದೆ ಎಂದರು.

    ಚರ್ಚೆ: ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ವಿಜಯ್‌ಕುಮಾರ್ ಅವರು ಮಂತರ್‌ಗೌಡ ಅವರನ್ನು ಭೇಟಿಯಾಗಿ ಕೆಲ ಹೊತ್ತು ಚರ್ಚೆ ನಡೆಸಿದರು. ಲೋಕಸಭಾ ಅಭ್ಯರ್ಥಿ ಬಗ್ಗೆ ಪ್ರಶ್ನೆ ಕೇಳಿದಾಗ ಶಾಸಕರು ಮಾತನಾಡಿ, ಕೊಡಗು ಜಿಲ್ಲೆಯವರೇ ಕಾಂಗ್ರೆಸ್ ಅಭ್ಯರ್ಥಿಯಾದರೆ ನಮಗೂ ಹುಮ್ಮಸ್ಸು ಹೆಚ್ಚಿರುತ್ತೆ. ಆದರೂ ಪಕ್ಷದ ಅಧಿಕೃತ ಅಭ್ಯರ್ಥಿ ಪರವಾಗಿ ಕೆಲಸ ಮಾಡಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲೀಡ್ ಬರುವಂತೆ ನೋಡಿಕೊಳ್ಳುತ್ತೇವೆ ಎಂದರು.

    ಶೆಲ್ಟರ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ: ಬಸ್ ನಿಲ್ದಾಣದ ಎದುರು ಹೂವು, ಹಣ್ಣು ಮಾರಾಟ ಮಾಡುವವರಿಗಾಗಿ ಉತ್ತಮವಾದ ಮತ್ತು ಚೆಂದಗಾಣಿಸುವ ಶೆಲ್ಟರ್ ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಲು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅವರಿಗೆ ಸೂಚಿಸಿದರು. ಅದಕ್ಕೆ ಶಾಸಕರ ನಿಧಿಯಿಂದಲೂ ಅನುದಾನ ಕಲ್ಪಿಸುತ್ತೇನೆ ಎಂದು ತಿಳಿಸಿದರು.

    ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕಾರ್ಯದರ್ಶಿ ಪ್ರಕಾಶ್, ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಕುಮಾರ್, ಗೊಂದಿಬಸವನಹಳ್ಳಿ ಗೋವಿಂದಪ್ಪ, ಪುರಸಭೆ ಸದಸ್ಯರಾದ ವಿ.ಎಸ್.ಅನಂದಕುಮಾರ್, ಎಂ.ಕೆ.ದಿನೇಶ್, ಶೇಖ್ ಕಳಿಮುಲ್ಲಖಾನ್, ಪ್ರಮುಖರಾದ ಲಿಂಗಮ್, ಜಗದೀಶ್, ನವೀನ್ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts